ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾದ ರಾಜ್ಯದ ಸ್ತಬ್ಧಚಿತ್ರ: ಬೊಮ್ಮಾಯಿ ಹರ್ಷ

Last Updated 15 ಜನವರಿ 2022, 16:37 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ' ಎಂದು ಅವರು ತಿಳಿಸಿದ್ದಾರೆ.

‘ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ’ ಎಂದು ಬೊಮ್ಮಾಯಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT