ಬೆಂಗಳೂರು: ‘ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರ ವಿರುದ್ಧ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಜಾರಿಯ ಪರಿಸ್ಥಿತಿ ಇನ್ನೂ ಬಂದಿಲ್ಲ. ಸದ್ಯಕ್ಕೆ ಎಸ್ಮಾ ಜಾರಿ ಇಲ್ಲ. ಸಾರಿಗೆ ನೌಕರರಿಗೂ ಜನರ ಕಷ್ಟ ಗೊತ್ತಾಗಿದೆ. ಒಂದೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂಬ ವಿಶ್ವಾಸ ಇದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮೊದಲು ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಲಿ. ಆ ಬಳಿಕ ಮಾತುಕತೆಗೆ ನಾವು ಸಿದ್ಧರಿದ್ಸೇವೆ’ ಎಂದರು.

‘ಸಾರಿಗೆ ನೌಕರರ ಮುಷ್ಕರ ಕಾರಣ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಬೆಳಿಗ್ಗೆಯಿಂದ ನಿರಂತರವಾಗಿ ಸಮಸ್ಯೆ ಬಗೆಹರಿಸಲು ಯತ್ನ ನಡೆಯುತ್ತಿದೆ. ಮುಖ್ಯಮಂತ್ರಿ ಕೂಡಾ ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾರಿಗೆ ಸಚಿವರು ನಿರ್ಲಕ್ಷ್ಯ ತೋರಿಲ್ಲ. ಬಹುತೇಕ ನೌಕರರು ಕರ್ತವ್ಯಕ್ಕೆ ಗೈರಾಗಿದ್ದಾರೆ. ಸಾರ್ವಜನಿಕರ ದೃಷ್ಟಿಯಿಂದ ಎಲ್ಲ ರೀತಿಯ ರಕ್ಷಣೆ ಕೊಡುತ್ತಿದ್ದೇವೆ. ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ನಷ್ಟದ ಸಂದರ್ಭದಲ್ಲೂ ಸಾರಿಗೆ ನೌಕರರಿಗೆ ವೇತನ ನೀಡುವ ಮೂಲಕ ಅವರ ಜೊತೆ ಸರ್ಕಾರ ನಿಂತಿದೆ’ ಎಂದರು.

‘ಕೋವಿಡ್ ಸಂದರ್ಭದಲ್ಲಿ ಬೇಡಿಕೆ ಈಡೇರಿಸುವುದು ಕಷ್ಟ. ಮೊದಲು ಮುಷ್ಕರ ಕೈಬಿಟ್ಟು ಮಾತುಕತೆಗೆ ಬನ್ನಿ’ ಎಂದೂ ಮುಷ್ಕರ ನಿರತರನ್ನು ಬೊಮ್ಮಾಯಿ ಆಹ್ವಾನಿಸಿದರು.

ಇದನ್ನೂ ಓದಿ... ಏ ಸವದಿ ನೌಕರರನ್ನು ಕರೆದು ಮಾತಾಡಪ್ಪ: ಫೋನ್ ಕರೆ ಮಾಡಿ ಸಿದ್ದರಾಮಯ್ಯ ಸಲಹೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.