ಮಂಗಳವಾರ, ಮಾರ್ಚ್ 2, 2021
23 °C

ಸ್ಫೋಟಕ ಬಳಕೆಗೆ ಹೊಸ ಮಾರ್ಗಸೂಚಿ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಗಣಿಗಾರಿಕೆಯಲ್ಲಿ ಸ್ಫೋಟಕ ವಸ್ತುಗಳ ಬಳಕೆ ಕುರಿತು ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗುವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು,‘ಸ್ಫೋಟಕ ವಸ್ತುಗಳಿಗೆ  ಅನುಮತಿ ನೀಡುವ ಕುರಿತು ಗೃಹ ಇಲಾಖೆಯಲ್ಲಿ ಚರ್ಚೆಗಳು ನಡೆದಿವೆ. ಪರವಾನಗಿ ಪಡೆದವರು ಸ್ಫೋಟಕಗಳ ಬಳಕೆ ಪ್ರಮಾಣ‌, ಅದರ ಗುಣಮಟ್ಟ ಸೇರಿದಂತೆ ಪ್ರಮುಖ ಅಂಶಗಳ ಪರಾಮರ್ಶೆ ನಡೆದಿದೆ. ಇವುಗಳನ್ನು ಒಳಗೊಂಡ ಮಾರ್ಗಸೂಚಿಯನ್ನು ಸೋಮವಾರ ಬಿಡುಗಡೆ ಮಾಡಲಾಗುವುದು’ ಎಂದರು.

‘ಹುಣಸೋಡಿ ಸ್ಫೋಟ ಪ್ರಕರಣದಲ್ಲಿ ಸುಧಾಕರ್ ಎಂಬಾತನನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಪ್ರಾಥಮಿಕ ವರದಿ ಭಾನುವಾರ ಬರುವ ಸಾಧ್ಯತೆ ಇದೆ. ಗಣಿಗಾರಿಕೆ ಪರವಾನಗಿ ಪಡೆದವರು ನಿಯಮಗಳನ್ನು ಸರಿಯಾಗಿ ಪಾಲಿಸಬೇಕು. ಪರವಾನಗಿ ಇಲ್ಲದೆ ಅನ್ಯಮಾರ್ಗಗಳಿಂದ ಗಣಿಗಾರಿಕೆ ನಡೆಸುವರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದೂ ಎಚ್ಚರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು