ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ನೇಮಕ ಅಕ್ರಮ; ಆಡಿಯೊ ಬಗ್ಗೆಯೂ ತನಿಖೆ: ಬಸವರಾಜ ಬೊಮ್ಮಾಯಿ‌

Last Updated 23 ಏಪ್ರಿಲ್ 2022, 5:47 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಂಗ್ರೆಸ್‌ ಶಾಸಕ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿರುವ ಆಡಿಯೊ ಬಗ್ಗೆ ಕೂಡ ತನಿಖೆ ನಡೆಸುತ್ತೇವೆ. ಯಾರೇ ತಪ್ಪಿತಸ್ಥರು ಇದ್ದರೂ ಕ್ರಮ ಕೈಗೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಆರ್‌.ಟಿ. ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದ ಆಡಿಯೊವನ್ನು ನಾನು ನೋಡಿಲ್ಲ. ಆಡಿಯೊದಲ್ಲಿರುವ ಆ ಇಬ್ಬರು ಯಾರು? ಅವರ ಅರ್ಹತೆ, ವಿಶ್ವಾಸಾರ್ಹತೆ ಏನು? ಎಲ್ಲವನ್ನೂ ತನಿಖೆ ಮಾಡಿಸಲಾಗುವುದು’ ಎಂದರು.

545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮದ ಬಗ್ಗೆ ತನಿಖೆ ನಡೆಯುತ್ತಿರುವ ಮಧ್ಯೆಯೇ ಶೀಘ್ರದಲ್ಲಿಯೇ ನಡೆಯಲಿದ್ದ 402 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿಯೂ ಅಕ್ರಮವಾಗಿ ಆಯ್ಕೆಯಾಗುವ ಬಗ್ಗೆ ಇಬ್ಬರು ಮಾತನಾಡಿರುವ ಆಡಿಯೊವನ್ನು ಕಲಬುರಗಿಯಲ್ಲಿ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದ್ದಾರೆ.

ಬೆಂಗಳೂರಿನ ಕೆಲವು ಶಾಲೆಗಳಿಗೆ ಇತ್ತೀಚೆಗೆ ಹುಸಿ ಬಾಂಬ್ ಬೆದರಿಕೆ ಸಿರಿಯಾ ಮತ್ತು ಪಾಕಿಸ್ತಾನದಿಂದ ಇ– ಮೇಲ್‌ ಮೂಲಕ ಬಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಈ ವಿಚಾರದ ನನಗೆ ಗೊತ್ತಿಲ್ಲ. ನಾನು ಪೊಲೀಸ್‌ ಕಮಿಷನರ್ ಜೊತೆಗೆ ಮಾತನಾಡುತ್ತೇನೆ‘ ಎಂದರು.

‘ಶಾಂತಿ ಕದಡಲು ಇಂಥ ಪ್ರಯತ್ನಗಳು ಆಗಾಗ ನಡೆಯುತ್ತಿರುತ್ತವೆ. ನಾವು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ತನಿಖೆ ಮಾಡುತ್ತೇವೆ. ಇಮೇಲ್ ಎಲ್ಲಿಂದ ಬಂದಿದೆ ಎಂದು ಪತ್ತೆ ಮಾಡುತ್ತೇವೆ. ಯಾವ ದೇಶದಿಂದ ಬಂದಿದೆ ಎಂದು ಗೊತ್ತಾಗುತ್ತದೆ. ಅಗತ್ಯಬಿದ್ದರೆ ಆ ದೇಶಗಳ ಅಧಿಕಾರಿಗಳ ಜೊತೆಗೆ ಮಾತನಾಡುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT