ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಯೋಜನೆ ನಮ್ಮ ಹಕ್ಕು: ಬೊಮ್ಮಾಯಿ

Last Updated 12 ಜುಲೈ 2021, 19:48 IST
ಅಕ್ಷರ ಗಾತ್ರ

ಬೆಂಗಳೂರು: ‘ಕುಡಿಯುವ ನೀರಿನ ಉದ್ದೇಶದ ಮೇಕೆದಾಟು ಯೋಜನೆ ನಿರ್ಮಿಸುವುದು ನಮ್ಮ ರಾಜ್ಯದ ಹಕ್ಕು’ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ.

ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆ ವಿರೋಧಿಸಿ ಕೈಗೊಂಡ ನಿರ್ಣಯಕ್ಕೆ ಬೊಮ್ಮಾಯಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದರು.

‘ಈ ಯೋಜನೆಗೆ ಸಂಬಂಧಿಸಿದಂತೆ ಸಿದ್ಧಪಡಿಸಿರುವ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ. ಕಾವೇರಿ ಐ–ತೀರ್ಪಿನ ಪ್ರಕಾರ ನಮ್ಮ ಪಾಲಿನ ಹೆಚ್ಚುವರಿ ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಕೆ ಮಾಡುವ ಯೋಜನೆಯಾಗಿದೆ. ಇದನ್ನು ಜಾರಿಗೊಳಿಸುವ ಎಲ್ಲಾ ಹಕ್ಕು ಕರ್ನಾಟಕಕ್ಕಿದೆ. ರಾಜ್ಯದ ಜನರ ಹಿತವನ್ನು ರಕ್ಷಿಸಲು ಪೂರ್ಣಗೊಳಿಸಿಯೇ ತೀರುತ್ತೇವೆ. ರಾಜ್ಯ ಸರ್ಕಾರ ಈ ಸಂಬಂಧ ಸಲ್ಲಿಸಿರುವ ಮನವಿಯನ್ನು ಕೇಂದ್ರ ಸರ್ಕಾರ ಪರಿಗಣಿಸಬೇಕು’ ಎಂದು ಬೊಮ್ಮಾಯಿ ತಿಳಿಸಿದರು.

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸ್ಪಷ್ಟವಾದ ತೀರ್ಪು ಇದೆ. ಅದರ ಪ್ರಕಾರ, ತಮಿಳುನಾಡಿಗೆ ಯಾವ ಸಮಯಕ್ಕೆ ಎಷ್ಟು ನೀರು ಬಿಡಬೇಕು ಎಂಬುದರ ಕುರಿತು ಕಾವೇರಿ ಮಂಡಳಿ ಗಮನಿಸುತ್ತದೆ. ಸಂಕಷ್ಟದ ಸಂದರ್ಭದಲ್ಲಿ ಹೆಚ್ಚುವರಿ ನೀರನ್ನು ಹಂಚಿಕೆ ಮಾಡಿಕೊಳ್ಳುವುದರಿಂದ ಎರಡು ರಾಜ್ಯಗಳಿಗೆ ಅನುಕೂಲವಾಗುತ್ತದೆ ಎಂಬುದನ್ನು ತಮಿಳುನಾಡು ಸರ್ಕಾರ ಅರಿತುಕೊಳ್ಳಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT