ಅರವಿಂದ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣದ ತನಿಖೆಗೆ ಆದೇಶ: ಬೊಮ್ಮಾಯಿ

ಬೆಂಗಳೂರು: ಶಾಸಕ ಅರವಿಂದ ಬೆಲ್ಲದ್ ಅವರ ದೂರವಾಣಿಕೆ ಕದ್ದಾಲಿಕೆಯ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ತಮ್ಮ ಫೋನ್ ಕದ್ದಾಲಿಕೆ ಆಗುತ್ತಿದೆ ಎಂದು ಅವರು ವಿಧಾನಸಭಾಧ್ಯಕ್ಷರಿಗೆ ಮತ್ತು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕಾರಣ ತನಿಖೆ ನಡೆಸುವಂತೆ ಸೂಚಿಸಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತರು ತನಿಖೆಗೆ ಆದೇಶ ಮಾಡಿದ್ದಾರೆ ಎಂದು ಬೊಮ್ಮಾಯಿ ಸುದ್ದಿಗಾರರಿಗೆ ಹೇಳಿದರು.
ಇದನ್ನೂ ಓದಿ... ನನ್ನ ಫೋನ್ ಕರೆ ಕದ್ದಾಲಿಕೆಯಾಗುತ್ತಿದೆ: ಶಾಸಕ ಅರವಿಂದ್ ಬೆಲ್ಲದ್ ಆರೋಪ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.