ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಾಮರೆಡ್ಡಿ ನಿಧನ: ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ಸಂತಾಪ

Last Updated 15 ಏಪ್ರಿಲ್ 2022, 6:51 IST
ಅಕ್ಷರ ಗಾತ್ರ

ಬೆಂಗಳೂರು:ಚಿಕ್ಕಬಳ್ಳಾಪುರ ಜಿಲ್ಲಾ ಪ್ರಜಾ ಸಂಘರ್ಷ ಸಮಿತಿ ಸಂಚಾಲಕ ಹಾಗೂ ಸಿಪಿಎಂ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ (73) ಶುಕ್ರವಾರ ನಿಧನರಾಗಿದ್ದಾರೆ.

ಶ್ರೀರಾಮರೆಡ್ಡಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

‘ಹಿರಿಯ ಕಾರ್ಮಿಕ ಹಾಗೂ ರೈತ ಮುಖಂಡರು, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಮಾಜಿ ಶಾಸಕರು ಜಿ.ವಿ. ಶ್ರೀರಾಮರೆಡ್ಡಿ ಅವರು ನಿಧನರಾದ ವಿಷಯ ತಿಳಿದು ದುಃಖಿತನಾಗಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ಕರುಣಿಸಿ ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

‘ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಭಗವಂತ ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಅವರ ಕುಟುಂಬ ಸದಸ್ಯರು ಹಾಗೂ ಬಂಧು-ಬಳಗಕ್ಕೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

‘ಸಿಪಿಎಂ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ‌ ಶಾಸಕ ಜಿ.ವಿ.ಶ್ರೀರಾಮ ರೆಡ್ಡಿ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಬಡವರು, ಕಾರ್ಮಿಕರು ಮತ್ತು ರೈತರ ಪರ ಹೋರಾಟಕ್ಕೆ ಜೀವನವನ್ನೇ ಮುಡಿಪಾಗಿಟ್ಟಿದ್ದ ರೆಡ್ಡಿಯವರು ಇತ್ತೀಚಿನ ವರ್ಷಗಳಲ್ಲಿ‌ ಕೋಮುವಾದದ ವಿರುದ್ಧದ ಗಟ್ಟಿದನಿಯಾಗಿದ್ದರು. ವೈಯಕ್ತಿಕವಾಗಿ ನಾನು ಬಹುಕಾಲದ ಗೆಳೆಯನನ್ನು ಕಳೆದುಕೊಂಡಿದ್ದೇನೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಪ್ರಗತಿಪರ ಚಿಂತಕರು, ಕೃಷಿ-ಕಾರ್ಮಿಕರ ಪರ ಹೋರಾಟಗಾರರು ಹಾಗೂ ಮಾಜಿ ಶಾಸಕರಾದ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನದ ಸುದ್ದಿ ನನಗೆ ತೀವ್ರ ದುಃಖ ಉಂಟು ಮಾಡಿದೆ. ಸಿಪಿಎಂ (ಐ) ಪಕ್ಷದಿಂದ ಎರಡು ಬಾರಿ ಬಾಗೇಪಲ್ಲಿ ಕ್ಷೇತ್ರದಿಂದ ಆಯ್ಕೆ ಆಗಿದ್ದ ಅವರು, ಮಾದರಿ ಜನಪ್ರತಿನಿಧಿಯಷ್ಟೇ ಅಲ್ಲ, ಅತ್ಯುತ್ತಮ ಸಂಸದೀಯ ಪಟುವೂ ಹೌದು ಎಂದು ಎಚ್‌.ಡಿ.ಕುಮಾರಸ್ವಾಮಿ ಸ್ಮರಿಸಿದ್ದಾರೆ.

ಶ್ರೀರಾಮರೆಡ್ಡಿ ಅವರ ಅಗಲಿಕೆಯಿಂದ ರಾಜ್ಯದಲ್ಲಿ ನಡೆಯುತ್ತಿರುವ ವೈಚಾರಿಕಪರ ಹೋರಾಟದಲ್ಲಿ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿ ಅವರ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದುಕುಮಾರಸ್ವಾಮಿಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT