ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವರಾಜ ಅರಸು ಜನ್ಮದಿನ: ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ನಮನ

Last Updated 20 ಆಗಸ್ಟ್ 2022, 6:55 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 107ನೇ ಜನ್ಮದಿನದ ಅಂಗವಾಗಿ ಶನಿವಾರಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರು ನಮನ ಸಲ್ಲಿಸಿದ್ದಾರೆ.

‘ಹಿಂದುಳಿದ ವರ್ಗಗಳ ಆಶಾಕಿರಣ, ತಮ್ಮ ಆಡಳಿತದಲ್ಲಿ ಅನೇಕ ಆಮೂಲಾಗ್ರ ಬದಲಾವಣೆ ತಂದು, ಆಡಳಿತಕ್ಕೆ ಹೊಸ ಭಾಷ್ಯ ನೀಡಿದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ದೇವರಾಜ ಅರಸ್ ಅವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು’ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

‘ನಾಡು ಕಂಡ ಧೀಮಂತ ನಾಯಕ, ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸುರವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು’ ಎಂದು ಶಾಸಕ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

‘ಅಧಿಕಾರ, ಸಂಪತ್ತು ಮತ್ತು ಅವಕಾಶದ ಬಾಗಿಲನ್ನು ಎಲ್ಲರಿಗೂ ತೆರೆದು ಸಮಪಾಲು- ಸಮಬಾಳು ನೀಡಲು ಶ್ರಮಿಸಿದವರು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು. ಅವರ ಬದುಕು ಮತ್ತು ಸಾಧನೆ ಆಳುವವರಿಗೆಲ್ಲರಿಗೂ ಒಂದು ಆದರ್ಶದ ಮಾದರಿ. ಪರಿವರ್ತನೆಯ ಹರಿಕಾರನಿಗೆ ಹುಟ್ಟು ಹಬ್ಬದ ದಿನ ಗೌರವದಿಂದ ನಮಿಸುವೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಭೂ ಸುಧಾರಣೆಯು ಸೇರಿದಂತೆ ಅನೇಕ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದು ಕರ್ನಾಟಕವನ್ನು ಅಭಿವೃದ್ಧಿಪರ ರಾಜ್ಯವನ್ನಾಗಿ ರೂಪಿಸಿದ ಮಾಜಿ ಮುಖ್ಯಮಂತ್ರಿಗಳಾದ ದೇವರಾಜ ಅರಸು ಅವರ ಜಯಂತಿ ದಿನದಂದು ಆ ಮಹಾನ್ ಚೇತನಕ್ಕೆ ನನ್ನ ನಮನಗಳು’ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ಸಮಸಮಾಜ ನಿರ್ಮಾಣದ ರೂವಾರಿ, ಜನಪರ ನಾಯಕ, ಹಿಂದುಳಿದ ವರ್ಗಗಳ ಹರಿಕಾರ, ರಾಜ್ಯ ಕಂಡ ಶ್ರೇಷ್ಠಸಮಾಜ ಸುಧಾರಕ ಡಿ.ದೇವರಾಜ ಅರಸು ಅವರ ಕೊಡುಗೆ ಅಪಾರ. ಉಳುವವನಿಗೆ ಭೂಮಿ, ಹಾವನೂರು ಆಯೋಗದಂತಹ ಪ್ರಮುಖ ನಿರ್ಧಾರಗಳನ್ನು ಕೈಗೊಂಡು ಇವರು ಎಲ್ಲರಿಗೂ ಮಾದರಿಯಾಗಿದ್ದಾರೆ. ಶ್ರೀಯುತರ ಜನ್ಮದಿನದಂದು ಗೌರವ ನಮನಗಳು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT