ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಿಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ಅದಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಹೊತ್ತಿನಲ್ಲಿ ಬೊಮ್ಮಾಯಿ ರಾಜಭವನಕ್ಕೆ ಬರಲಿದ್ದಾರೆ.

ಪ್ರಮಾಣ ವಚನ ಸಮಾರಂಭಕ್ಕೆ ರಾಜಭವನ ಗಾಜಿನ ಮನೆಯಲ್ಲಿ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಮಾಜಿ ಸಚಿವರು, ಶಾಸಕರು ಒಬೊಬ್ಬರಾಗಿ ಬರುತ್ತಿದ್ದಾರೆ.

ಬೊಮ್ಮಾಯಿ ಅವರ ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಕುಟುಂಬದ ಸದಸ್ಯರು ಗಾಜಿನ ಮನೆಗೆ ಬಂದಿದ್ದಾರೆ. ರಾಜ್ಯದ ಶಾಸಕರು, ಬಿಜೆಪಿ ಮುಖಂಡರು ರಾಜಭವನದತ್ತ ಬರುತ್ತಿದ್ದಾರೆ.

ರಾಜಭವನದ ಹೊರಗಡೆ ಬೊಮ್ಮಾಯಿ ಬೆಂಬಲಿಗರು, ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ‘ಅಬ್ ಕೀ ಬಾರ್ ಬೊಮ್ಮಾಯಿಕೀ ದರ್ಬಾರ್’ ಎಂದು ಘೋಷಣೆ ಕೂಗುತ್ತಿದ್ದಾರೆ.

11 ಗಂಟೆಗೆ ಸರಿಯಾಗಿ ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವರು. ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರಮಾಣವಚನ ಬೋಧಿಸುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.