ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಸಮ್ಮಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದ ಬಸವರಾಜ ಹೊರಟ್ಟಿ

ಅಕ್ಷರ ಗಾತ್ರ

ಬೆಂಗಳೂರು: ಮಾಜಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ಚಿತ್ರಗಳನ್ನು ಹಂಚಿಕೊಂಡಿರುವ ಬೊಮ್ಮಾಯಿ, ‘ಮಾಜಿ ವಿಧಾನ ಪರಿಷತ್ ಸಭಾಪತಿ, ಜೆಡಿಎಸ್‌ ಪಕ್ಷದ ಹಿರಿಯ ನಾಯಕರಾದ ಬಸವರಾಜ ಹೊರಟ್ಟಿ ಅವರು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರಿದರು. ಅವರಿಗೆ ಪಕ್ಷದ ಧ್ವಜ ನೀಡಿ ಸ್ವಾಗತಿಸಲಾಯಿತು’ ಎಂದು ಬರೆದುಕೊಂಡಿದ್ದಾರೆ.

ಈ ಸಂದರ್ಭಧಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ ಹಾಗೂ ಆರ್‌. ಅಶೋಕ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT