ಮೀಸಲಾತಿ ಪಾದಯಾತ್ರೆಗಳಿಗೆ ಔಷಧಿ ಇಲ್ಲ: ಹೊರಟ್ಟಿ

ತುಮಕೂರು: ’ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮೀಸಲಾತಿ ಪಾದಯಾತ್ರೆಗಳಿಗೆ ಔಷಧಿ ಇಲ್ಲ. ನಾನು ಆ ಬಗ್ಗೆ ಮಾತನಾಡುವುದಿಲ್ಲ. ನಾವು ದೇಶ, ರಾಜ್ಯದ ಬಗ್ಗೆ ಕಾಳಜಿಯಿಂದ ಕೆಲಸ ಮಾಡಲು ಚಿಂತಿಸಬೇಕಿದೆ‘ ಎಂದು ವಿಧಾನ ಪರಿಷತ್ ನೂತನ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಸಿದ್ಧಗಂಗಾ ಮಠಕ್ಕೆ ಶುಕ್ರವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ‘ಪ್ರಸ್ತುತ ದಿನಗಳಲ್ಲಿ ಮೀಸಲಾತಿ ಬಗ್ಗೆ ಮಾತನಾಡುವುದು ಕಷ್ಟದ ಕೆಲಸ. ನಾವು ಜಾತ್ಯತೀತ ರಾಷ್ಟ್ರದಲ್ಲಿದ್ದೇವೆ. ಪ್ರತಿಯೊಬ್ಬರೂ ಚುನಾವಣೆಗೆ ನಿಲ್ಲಬೇಕಾದರೆ ಜಾತಿ ಮುಂದಿಟ್ಟುಕೊಳ್ಳುತ್ತಾರೆ. ಇದು ಒಳ್ಳೆಯದಲ್ಲ‘ ಎಂದರು.
‘2ಎ’ ಮೀಸಲಾತಿಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಪಾದಯಾತ್ರೆ ಬಗ್ಗೆ ಚರ್ಚಿಸುವುದಿಲ್ಲ. ಶ್ರೀಗಳು ನಮ್ಮೆಲ್ಲರಿಗೂ ಮಾರ್ಗದರ್ಶನ ಮಾಡುವಂತಹವರು. ಅವರ ಹೋರಾಟಕ್ಕೆ ದೇವರು ಒಳ್ಳೆಯದು ಮಾಡಲಿ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.