ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ

Last Updated 3 ಮೇ 2022, 5:45 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಂಗಳವಾರ ಜೆಡಿಎಸ್ ತೊರೆದು ಬಿಜೆಪಿ ಸೇರಿದರು.

ನಗರದ ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೊರಟ್ಟಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಜಗದೀಶ ಶೆಟ್ಟರ್, ಹಲವು ಸಚಿವರು, ಶಾಸಕರು ಉಪಸ್ಥಿತರಿದ್ದರು.

ಜನತಾ ಪರಿವಾರದಲ್ಲಿ ರಾಜಕೀಯ ಜೀವನ ಆರಂಭಿಸಿದ್ದ ಹೊರಟ್ಟಿ, ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸತತವಾಗಿ ಏಳು ಬಾರಿ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದಾರೆ. ಮುಂದಿನ ಚುನಾವಣೆಯನ್ನು ಬಿಜೆಪಿಯಿಂದ ಎದುರಿಸಲು ನಿರ್ಧರಿಸಿದ್ದಾರೆ.

ಜೆಡಿಎಸ್ ತೊರೆದು ಬಿಜೆಪಿ ಸೇರುವುದಾಗಿ ಹೊರಟ್ಟಿ ಇತ್ತೀಚೆಗೆ ಹೇಳಿಕೆ ನೀಡಿದ್ದರು. ವಿಧಾನ ಪರಿಷತ್‌ನ ಇತರ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿ ಘೋಷಿಸಿಲ್ಲ.

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುವೆ: ಬಿಜೆಪಿ ಸೇರಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬಸವರಾಜ ಹೊರಟ್ಟಿ, 'ಜೆಡಿಎಸ್ ಪಕ್ಷದ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮತದಾರರ ಅಭಿಪ್ರಾಯದಂತೆ ಬಿಜೆಪಿ ಸೇರಿದ್ದೇನೆ. ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ' ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT