ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವರಾಜ ಬೊಮ್ಮಾಯಿ ರಾಜಕೀಯ ಯಾನ: ಇಲ್ಲಿದೆ ಸಂಪೂರ್ಣ ವಿವರ

Last Updated 27 ಜುಲೈ 2021, 14:54 IST
ಅಕ್ಷರ ಗಾತ್ರ

ನಾಡಿನ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್‌.ಆರ್‌ ಬೊಮ್ಮಾಯಿ ಅವರ ಪುತ್ರರಾದ ಬಸವರಾಜ ಬೊಮ್ಮಾಯಿ, ರಾಜ್ಯ ರಾಜಕಾರಣದಲ್ಲಿ ವಿನಯಶೀಲ ವ್ಯಕ್ತಿತ್ವದಿಂದಲೇ ಹೆಸರಾದವರು. ಮೂಲತಃ ಜನತಾ ಪರಿವಾರದವರಾದ ಬೊಮ್ಮಾಯಿ ಅವರ ರಾಜಕೀಯ ಬದುಕು ಉಜ್ವಲಗೊಂಡಿದ್ದು ಮಾತ್ರ ಬಿಜೆಪಿಯಲ್ಲಿ. ಅವರ ರಾಜಕೀಯ ಯಾನದ ಮೈಲುಗಲ್ಲುಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ.

ಪಟೇಲರಿಗೆ ರಾಜಕೀಯ ಕಾರ್ಯದರ್ಶಿ: ‌1996ರಿಂದ 1997ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಜೆ.ಎಚ್‌.ಪಟೇಲ್‌ ಇವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ

ಎರಡು ಬಾರಿವಿಧಾನ ಪರಿಷತ್‌ಗೆ ಆಯ್ಕೆ:31–12–1997 ಹಾಗೂ 04–12–2003ರಲ್ಲಿ ರಾಜ್ಯ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳಿಂದ (ಧಾರವಾಡ–ಹಾವೇರಿ–ಗದಗ) ನಡೆದ ಚುನಾವಣೆಯಲ್ಲಿ ಸತತ ಎರಡು ಬಾರಿ ವಿಧಾನ ಪರಿಷತ್ತಿಗೆ ಸದಸ್ಯರಾಗಿ ಆಯ್ಕೆ

ಶಿಗ್ಗಾವಿ ಮೂಲಕ ವಿಧಾನಸಭೆಗೆ: 22–05–2008ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭೆ ಮತಕ್ಷೇತ್ರದಿಂದ ಆಯ್ಕೆ

ಎರಡು ಸರ್ಕಾರಗಳಲ್ಲಿ ಸಚಿವಗಿರಿ:ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಿ.ಎಸ್‌. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ ಹಾಗೂ ಜಗದೀಶ ಶೆಟ್ಟರ್‌ ಇವರ ಸಚಿವ ಸಂಪುಟದಲ್ಲಿ ಸತತ ಐದು ವರ್ಷಗಳವರೆಗೆ ಜಲಸಂಪನ್ಮೂಲ ಸಚಿವರಾಗಿ ಸೇವೆ.

ಎರಡನೇ ಬಾರಿಗೆ ಶಾಸಕ:ದಿನಾಂಕ–05–05–2013ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದಿಂದ ದ್ವಿತೀಯ ಬಾರಿಗೆ ಆಯ್ಕೆ

ಮೂರನೇ ಬಾರಿಗೆ ಶಾಸಕ: 12–05–2018ರಂದು ನಡೆದ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದಿಂದ ತೃತೀಯ ಬಾರಿಗೆ ಆಯ್ಕೆ.

ಗೃಹ ಸಚಿವ ಸ್ಥಾನ: ಗೃಹ ಸಚಿವರಾಗಿ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ.

ರಾಜ್ಯದ ಮುಖ್ಯಮಂತ್ರಿ: ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿ.ಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ 26–07–2021ರಂದುರಾಜೀನಾಮೆ ನೀಡಬೇಕಾಯಿತು. ಬಿಎಸ್‌ವೈ ಅವರಿಂದ ತೆರವಾದ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು 27–07–2021ರಂದು ಬಿಜೆಪಿ ಹೈಕಮಾಂಡ್‌ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT