ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಚುನಾವಣೆ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಚಿಂತನೆ

Last Updated 4 ಡಿಸೆಂಬರ್ 2020, 15:27 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಮುಂದಿನ ಹೆಜ್ಜೆಯ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ಬೆಂಗಳೂರು ನಗರದ ಸಚಿವರು, ಸಂಸದರು, ಶಾಸಕರ ಸಭೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ವೇದಿಕೆಯಲ್ಲೂ ಚರ್ಚೆ:ಫೆಬ್ರವರಿ ಹೊತ್ತಿಗೆ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ರಾಜ್ಯ ಹೈಕೋರ್ಟ್‌ ನೀಡಿರುವ ತೀರ್ಪಿನ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಇದೇ ವೇಳೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

‘ನ್ಯಾಯಾಲಯದ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಬೇಕಾ? ಇಲ್ಲವಾ ಎಂಬುದರ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ಇರುವ ಎಲ್ಲ ಸಾಧ್ಯತೆಗಳ ಬಗ್ಗೆ ಚರ್ಚೆ ಮಾಡಲಾಗುವುದು’ ಎಂದು ಅವರು ತಿಳಿಸಿದರು.

‘ಬಿಬಿಎಂಪಿಗೆ ಪ್ರತ್ಯೇಕ ಕಾಯ್ದ ಆಗಬೇಕು ಎನ್ನುವುದು ನಮ್ಮ ಬಯಕೆ. ಅದನ್ನು ನಮ್ಮ ಪ್ರಣಾಳಿಕೆಯಲ್ಲಿಯೇ ಹೇಳಿದ್ದೇವೆ. ಅದಕ್ಕಾಗಿ ನಾವು ಪ್ರತಿಪಕ್ಷದ ಜೊತೆ ಚರ್ಚಿಸುತ್ತೇವೆ. ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT