ಭಾನುವಾರ, ಮೇ 29, 2022
30 °C

ಮೂರು ತಿಂಗಳೊಳಗೆ ಬಿಬಿಎಂಪಿ ಚುನಾವಣೆ: ಸೋಮಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಮುಂದಿನ ಮೂರು ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗಿದೆ’ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ವಿ.ಸೋಮಣ್ಣ ಪ್ರತಿಷ್ಠಾನದ ವತಿಯಿಂದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮೂಡಲಪಾಳ್ಯ ವಾರ್ಡ್‌ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಶಿವಕುಮಾರ ಸ್ವಾಮೀಜಿಯವರು ನಾಗರಿಕ ಸಮಾಜದಲ್ಲಿನ ಅಂಧಕಾರವನ್ನು ತೊಲಗಿಸಿ ವಿದ್ಯೆಯೆಂಬ ಬೆಳಕು ನೀಡಿದವರು. ಇಡೀ ವಿಶ್ವಕ್ಕೆ ದಾಸೋಹದ ಮಹತ್ವ ಸಾರಿದ್ದವರು. ಶಿವಕುಮಾರ ಸ್ವಾಮೀಜಿ ಹಾಗೂ ಬಾಲಗಂಗಾಧರನಾಥ ಸ್ವಾಮೀಜಿಯವರ ಆಶೀರ್ವಾದದಿಂದಾಗಿ ನಾನು ರಾಜಕೀಯ ಕ್ಷೇತ್ರದಲ್ಲಿ ದೊಡ್ಡ ಸ್ಥಾನಗಳನ್ನು ಅಲಂಕರಿಸಲು ಸಾಧ್ಯವಾಯಿತು. ಅವರಿಬ್ಬರು ಮಹಾನ್‌ ತಪಸ್ವಿಗಳು. ಶಿವಕುಮಾರ ಸ್ವಾಮೀಜಿಯವರ ಆದರ್ಶವನ್ನು ಪ್ರತಿಯೊಬ್ಬರೂ ತಮ್ಮ  ಜೀವನದಲ್ಲಿ ಆಳವಡಿಕೊಂಡು ಎಲ್ಲರ ಪ್ರೀತಿ ವಿಶ್ವಾಸ ಗಳಿಸಬೇಕು’ ಎಂದರು.

‘ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅರುಂದತಿನಗರದಲ್ಲಿ ಕನಕಭವನ ನಿರ್ಮಾಣ ಮಾಡಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಐಎಎಸ್‌ ಹಾಗೂ ಐಪಿಎಸ್‌ ತರಬೇತಿ ಕೇಂದ್ರ ಆರಂಭಿಸಲಾಗುತ್ತಿದೆ. ಮಾನಸನಗರದಲ್ಲಿ 295 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಿಸಲಾಗುತ್ತಿದೆ’ ಎಂದು ತಿಳಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.