ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಪ್ಟೆಂಬರ್‌ನಲ್ಲಿ 1ರಿಂದ 8ನೇ ತರಗತಿ ಆರಂಭಿಸಲು ತೀರ್ಮಾನ: ಬಿ.ಸಿ.ನಾಗೇಶ್‌

Last Updated 12 ಆಗಸ್ಟ್ 2021, 19:48 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 23 ರಿಂದ 9 ರಿಂದ 12 ನೇ ತರಗತಿಗಳು ಆರಂಭವಾಗಲಿದ್ದು, ಅದರ ಪ್ರತಿಕ್ರಿಯೆಯನ್ನು ಆಧರಿಸಿ 1 ರಿಂದ 8 ನೇ ತರಗತಿಗಳನ್ನು ಸೆಪ್ಟಂಬರ್‌ನಿಂದ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದರು.

23 ರಿಂದ ಆರಂಭವಾಗುವ ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಶುಕ್ರವಾರ ವಿಸ್ತೃತ ಎಸ್‌ಒಪಿ(ಪ್ರಮಾಣಿತ ಕಾರ್ಯಚರಣೆ ವಿಧಾನ) ಬಿಡುಗಡೆ ಮಾಡಲಾಗುವುದು ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

1 ರಿಂದ 8 ನೇ ತರಗತಿ ಆರಂಭಿಸಬೇಕು ಎಂಬ ಒತ್ತಡ ಪೋಷಕರಿಂದ ಬರುತ್ತಿದೆ. ತರಗತಿಗಳನ್ನು ಆರಂಭಿಸಬೇಕು ಎಂಬ ಆಲೋಚನೆ ಇದೆ. ಕೋವಿಡ್‌ನಿಂದ ಮಕ್ಕಳಿಗೆ ಹೆಚ್ಚಿನ ತೊಂದರೆ ಆಗುವುದಿಲ್ಲ ಎಂದು ಕೋವಿಡ್‌ ತಾಂತ್ರಿಕ ಸಮಿತಿ ಮತ್ತು ಮಕ್ಕಳ ತಜ್ಞರು ಹೇಳಿದ್ದಾರೆ. 9 ರಿಂದ 12 ತರಗತಿಗಳ ಪ್ರತಿಕ್ರಿಯೆ ಗಮನಿಸಲಾಗುವುದು ಎಂದರು.

1 ರಿಂದ 8 ನೇ ತರಗತಿಗಳನ್ನು ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಇದೇ 30 ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ನಾಗೇಶ್‌ ಹೇಳಿದರು.

ಪ್ರೌಢ ಮತ್ತು ಪದವಿ ಪೂರ್ವ ಭೌತಿಕ ತರಗತಿಗಳನ್ನು ಆರಂಭಿಸುವ ಪೂರ್ವಭಾವಿಯಾಗಿ ಶುಕ್ರವಾರ ಶಿಕ್ಷಣ, ಗೃಹ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಲು ಉದ್ದೇಶಿಸಲಾಗಿದೆ. 9 ರಿಂದ 12 ನೇ ತರಗತಿ ಮಕ್ಕಳು ಎಸ್ಒಪಿ ಪಾಲಿಸುವ ಸಾಮರ್ಥ್ಯ ಹೊಂದಿದ್ದಾರೆ. ಅವರ ನಡವಳಿಕೆಯೂ ಅದಕ್ಕೆ ಪೂರಕವಾಗಿರುತ್ತದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT