ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸಗೊಬ್ಬರ: ಕೇಂದ್ರದ ಸೂಚನೆ ವಿರುದ್ಧ ಆದೇಶ ಹೊರಡಿಸಿಲ್ಲ ಎಂದ ಬಿ.ಸಿ ಪಾಟೀಲ

ಕೃಷಿ ಸಚಿವ ಬಿ.ಸಿ. ಪಾಟೀಲ ಸ್ಪಷ್ಟನೆ
Last Updated 18 ಏಪ್ರಿಲ್ 2021, 16:19 IST
ಅಕ್ಷರ ಗಾತ್ರ

ಬೆಂಗಳೂರು: ದಾಸ್ತಾನು ಇರುವ ರಸಗೊಬ್ಬರವನ್ನು ಹಳೆಯ ದರದಲ್ಲೇ ಮಾರಾಟ ಮಾಡಬೇಕು ಎಂಬ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡರ ಸೂಚನೆಯ ವಿರುದ್ಧ ರಾಜ್ಯದ ಕೃಷಿ ಇಲಾಖೆ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಸ್ಪಷ್ಟಪಡಿಸಿದ್ದಾರೆ.

‘ಕೇಂದ್ರದ ಸೂಚನೆಯ ವಿರುದ್ಧವೇ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ’ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಚಿವರು, ‘ಸಿದ್ದರಾಮಯ್ಯ ಆರೋಪದಲ್ಲಿ ಹುರುಳಿಲ್ಲ. ಅವರು ಇಲ್ಲಸಲ್ಲದ ಹೇಳಿಕೆಗಳ ಮೂಲಕ ರಾಜ್ಯದ ರೈತರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ದೂರಿದ್ದಾರೆ.

ದಾಸ್ತಾನು ಇರುವ ಹಳೆಯ ರಸಗೊಬ್ಬರವನ್ನು ಹಳೆಯ ದರದಲ್ಲೇ ಮಾರಾಟ ಮಾಡಬೇಕು ಎಂಬುದಾಗಿ ಮಾರಾಟಗಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ಬಗ್ಗೆ ಕೃಷಿ ಇಲಾಖೆಯಿಂದ ವ್ಯಾಪಕವಾಗಿ ಪ್ರಚಾರವನ್ನೂ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಅವರ ಹೇಳಿಕೆ ಶುದ್ಧ ಸುಳ್ಳುಗಳಿಂದ ಕೂಡಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT