ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಆಡಳಿತದಲ್ಲಿ BDA ಎಂದರೆ ‘ಭ್ರಷ್ಟಾಚಾರ ಡೆವಲಪ್ಮೆಂಟ್ ಅಥಾರಿಟಿ’:ಕಾಂಗ್ರೆಸ್

Last Updated 11 ಫೆಬ್ರವರಿ 2023, 9:53 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಆಡಳಿತದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಭ್ರಷ್ಟಾಚಾರ ಡೆವಲಪ್ಮೆಂಟ್ ಅಥಾರಿಟಿಯಾಗಿ ಬದಲಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ವ್ಯಾಪಕ ಅವ್ಯವಹಾರ ನಡೆಯುತ್ತಿರುವ ದೂರುಗಳನ್ನು ಆಧರಿಸಿ ಬಿಡಿಎ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಶುಕ್ರವಾರ ದಾಳಿ ಮಾಡಿ ಶೋಧ ನಡೆಸಿದ್ದಾರೆ. ಕಚೇರಿಯಲ್ಲಿದ್ದ ಮೂವರು ದಲ್ಲಾಳಿಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಪ್ರಜಾವಾಣಿ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಬೆಂಗಳೂರಿನ ಬದಲು ಭ್ರಷ್ಟಾಚಾರವನ್ನು ‘ಡೆವಲಪ್ಮೆಂಟ್’ ಮಾಡಿದ್ದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರ. ಇದೇ ಬೊಮ್ಮಾಯಿ ಅವರ ಹೆಗ್ಗಳಿಕೆ ಮತ್ತು ಸಾಧನೆಯಾಗಿದೆ’ ಎಂದು ಕುಟುಕಿದೆ.

ನಿವೇಶನ ಹಂಚಿಕೆ, ಪರಿಹಾರ ವಿತರಣೆ ಮುಂತಾದ ಪ್ರಕ್ರಿಯೆಗಳಲ್ಲಿ ಭಾರಿ ಅಕ್ರಮಗಳು ನಡೆದಿರುವುದು ಲೋಕಾಯುಕ್ತ ದಾಳಿಯಿಂದ ಹೊರಬಂದಿದೆ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT