ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸಿಗೆ ಬ್ಲಾಕಿಂಗ್‌ ದಂಧೆ: ವರದಿ ಸಲ್ಲಿಕೆ

Last Updated 6 ಮೇ 2021, 20:30 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವಾರ್‌ ರೂಂ ಸಿಬ್ಬಂದಿ ಸರ್ಕಾರಿ ಕೋಟಾದ ಹಾಸಿಗೆ ಹಂಚಿಕೆ ವೇಳೆ ಅಕ್ರಮ ನಡೆಸುತ್ತಿರುವ ಆರೋಪದ ಕುರಿತು ವಿಚಾರಣೆ ನಡೆಸಿರುವ ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ ಅವರು ಮುಖ್ಯ ಆಯುಕ್ತ ಗೌರವ್‌ ಗುಪ್ತ ಅವರಿಗೆ ಗುರುವಾರ ವರದಿ ಸಲ್ಲಿಸಿದರು.

ಸಂದೇಹಾಸ್ಪದವಾಗಿ ಹಾಸಿಗೆ ಬ್ಲಾಕ್‌ ಮಾಡಿರುವ 12 ನಿರ್ದಿಷ್ಟ ಪ್ರಕರಣಗಳ ಬಗ್ಗೆ ವಿಚಾರಣೆ ನಡೆಸುವಂತೆ ಮುಖ್ಯ ಆಯುಕ್ತರು ತುಳಸಿ ಮದ್ದಿನೇನಿ ಅವರಿಗೆ ಸೂಚಿಸಿದ್ದರು.

‘ಹಾಸಿಗೆ ಬ್ಲಾಕಿಂಗ್‌ ದಂಧೆ ಆರೋಪಗಳ ಕುರಿತ ಪ್ರಾಥಮಿಕ ವರದಿಯನ್ನು ವಿಶೇಷ ಆಯುಕ್ತರು ಸಲ್ಲಿಸಿದ್ದಾರೆ. ಸದ್ಯಕ್ಕೆ ದಕ್ಷಿಣ ವಲಯದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಆರೋಪಗಳಿಗೆ ಸಂಬಂಧಿಸಿದ್ದ ವಿವರಗಳು ಮಾತ್ರ ವರದಿಯಲ್ಲಿವೆ. ಇತರ ವಲಯಗಳ ವಾರ್‌ ರೂಂಗಳಲ್ಲಿಯೂ ಅಕ್ರಮ ನಡೆದಿರುವ ಸಂದೇಹಗಳಿವೆ. ಅವುಗಳ ಕುರಿತ ಮಾಹಿತಿ ಇನ್ನಷ್ಟೇ ಪಡೆಯಬೇಕಿದೆ’ ಎಂದು ಗೌರವ್ ಗುಪ್ತ ‘ಪ್ರಜಾವಾಣಿ’ಗೆ ತಿಳಿಸಿದರು.

‘ತನಿಖೆ ಇನ್ನೂ ಪೂರ್ಣಗೊಂಡಿಲ್ಲವಾದ ಕಾರಣ ವರದಿಯಲ್ಲಿರುವ ಅಂಶಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT