ಬೆಂಗಳೂರು: ರಾಜ್ಯದ ಎಲ್ಲ ವಯಸ್ಕರಿಗೂ ನವೆಂಬರ್ ಅಂತ್ಯದೊಳಗೆ ಎರಡು ಡೋಸ್ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ಕೋವಿಡ್ ಲಸಿಕೆ ಅಭಿಯಾನದಲ್ಲಿ ಹಿಂದುಳಿದಿರುವ 23 ಜಿಲ್ಲೆಗಳ ಅಧಿಕಾರಿಗಳ ಜತೆ ಸೋಮವಾರ ವಿಡಿಯೊ ಸಂವಾದ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸೆಪ್ಟೆಂಬರ್ ಅಂತ್ಯದೊಳಗೆ ಎಲ್ಲರಿಗೂ ಮೊದಲ ಡೋಸ್ ಲಸಿಕೆ ನೀಡುವಂತೆ ಸೂಚಿಸಲಾಗಿದೆ. ನವೆಂಬರ್ ಅಂತ್ಯದೊಳಗೆ ಎರಡೂ ಡೋಸ್ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ’ ಎಂದರು.

ಕೋವಿಡ್ ಪರೀಕ್ಷೆ, ಆಮ್ಲಜನಕ ಉತ್ಪಾದನಾ ಘಟಕಗಳ ಆರಂಭ, ಆಸ್ಪತ್ರೆಗಳ ಸಿದ್ಧತೆ ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಕೋವಿಡ್ ನಿಯಂತ್ರಣದ ಉದ್ದೇಶದಿಂದ ಗಣೇಶೋತ್ಸವಕ್ಕೆ ಬಿಗಿಯಾದ ಷರತ್ತುಗಳನ್ನು ವಿಧಿಸಲಾಗಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ದೃಢಪ್ರಮಾಣ ದರದ ಸರಾಸರಿ ಶೇಕಡ 0.7ರಷ್ಟಿದೆ. ಯಾವುದೇ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ದೃಢಪ್ರಮಾಣ ದರ ಶೇ 2ಕ್ಕಿಂತ ಹೆಚ್ಚಾದರೆ ಆ ಜಿಲ್ಲೆಗೆ ಪ್ರತ್ಯೇಕವಾದ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು.

ಗಡಿಯಲ್ಲಿ ಕಟ್ಟೆಚ್ಚರ: ಕೇರಳದಲ್ಲಿ ನಿಫಾ ವೈರಸ್ ಸೋಂಕಿನಿಂದ ಬಾಲಕ ಮೃತಪಟ್ಟಿದ್ದಾನೆ. ನಿಫಾ ವೈರಸ್ ಸೋಂಕು ರಾಜ್ಯ ಪ್ರವೇಶಿಸದಂತೆ ತಡೆಯಲು ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.