ಶನಿವಾರ, ಮೇ 21, 2022
26 °C
ಕಲ್ಯಾಣ ಕರ್ನಾಟಕದ ಸಂಸ್ಥೆಗಳಿಗೆ ಅನುದಾನ ನೀಡಲು ಆಗ್ರಹ

ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಂದ ಭಿಕ್ಷಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಆರು ಜಿಲ್ಲೆಗಳ ಪದಾಧಿಕಾರಿಗಳು ಹಾಗೂ ಖಾಸಗಿ ಶಾಲೆಗಳ ಶಿಕ್ಷಕ, ಶಿಕ್ಷಕಿಯರು, ಅನುದಾನ ನೀಡುವಂತೆ ಸರ್ಕಾರವನ್ನು ಆಗ್ರಹಪಡಿಸಿ ನಗರದಲ್ಲಿ ಮಂಗಳವಾರ ಭಿಕ್ಷಾಟನೆ ಪಾದಯಾತ್ರೆ ನಡೆಸಿದರು.

ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತದಿಂದ ಭಿಕ್ಷಾಟನೆ ಆರಂಭಿಸಿ, ಮಿನಿವಿಧಾನಸೌಧದ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಕಚೇರಿವರೆಗೆ ಪಾದಯಾತ್ರೆ ಮಾಡಿದರು. ತಟ್ಟೆ ಬಾರಿಸುತ್ತಾ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿದರು.

‘1995ರಿಂದ 2015ರ ಅವಧಿಯಲ್ಲಿ ಆರಂಭಗೊಂಡಿರುವ ಎಲ್ಲ ಕನ್ನಡ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಬೇಕು. 371 (ಜೆ) ಜಾರಿ ಆದಾಗಿನಿಂದ ಬಳಕೆಯಾಗದೆ ಉಳಿದಿರುವ ಕೆಕೆಆರ್‌ಡಿಬಿ ನಿಧಿಯನ್ನು ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಏಳಿಗೆಗಾಗಿ ‘ಶೈಕ್ಷಣಿಕ ಕಲ್ಯಾಣ ನಿಧಿ’ ಎಂದು ಘೋಷಿಸಬೇಕು’ ಎಂದು ಒತ್ತಾಯಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು