ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ವರ್ಷ ಭಿಕ್ಷಾಟನೆಗೆ ಬಳಕೆಯಾಗುತ್ತಿದ್ದ 28 ಮಕ್ಕಳ ರಕ್ಷಣೆ: ಶ್ರೀನಿವಾಸ ಪೂಜಾರಿ

Last Updated 17 ಡಿಸೆಂಬರ್ 2021, 21:44 IST
ಅಕ್ಷರ ಗಾತ್ರ

ಬೆಳಗಾವಿ: ತುಮಕೂರು ಮತ್ತು ಬೆಂಗಳೂರಿನಲ್ಲಿ ಭಿಕ್ಷಾಟನೆಗೆ ಬಳಕೆಯಾಗುತ್ತಿದ್ದ 28 ಮಕ್ಕಳನ್ನು ಈ ವರ್ಷ ರಕ್ಷಣೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಶುಕ್ರವಾರ ಜೆಡಿಎಸ್‌ನ ಗೋವಿಂದ ರಾಜು ಪ್ರಶ್ನೆಗೆ ಉತ್ತರಿಸಿದ ಅವರು, ‘ಕೆಲವರು ಸ್ವಂತ ಮಕ್ಕಳನ್ನು ಭಿಕ್ಷಾಟನೆಗೆ ಬಳಸಿದರೆ, ಇನ್ನು ಕೆಲವರು ಬೇರೆಯವರ ಮಕ್ಕಳನ್ನು ಬಳಕೆ ಮಾಡುವುದು ಕಂಡುಬಂದಿದೆ. ತುಮಕೂರಿನಲ್ಲಿ ಆರು ಮಕ್ಕಳನ್ನು ರಕ್ಷಿಸಲಾಗಿದೆ. ಬೆಂಗಳೂರಿನ ವಿವಿಧೆಡೆ ಆಗಸ್ಟ್‌ ತಿಂಗಳಲ್ಲಿ 22 ಮಕ್ಕಳನ್ನು ಭಿಕ್ಷಾಟನೆಯಿಂದ ರಕ್ಷಿಸಲಾಗಿದೆ’ ಎಂದರು.

14 ಜಿಲ್ಲೆಗಳಲ್ಲಿ ಈಗಾಗಲೇ ಪುನರ್ವಸತಿ ಕೇಂದ್ರಗಳು ಇವೆ. ನಾಲ್ಕು ಜಿಲ್ಲೆಗಳಲ್ಲಿ ಪುನರ್ವಸತಿ ಕೇಂದ್ರಗಳ ನಿರ್ಮಾಣ ಪ್ರಗತಿಯಲ್ಲಿದೆ. ಉಳಿದ ಜಿಲ್ಲೆಗಳಲ್ಲೂ ಪುನರ್ವಸತಿ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

‘ಭಿಕ್ಷಾಟನೆ ನಿರ್ಮೂಲನೆಗಾಗಿ ನಗರ ಸ್ಥಳೀಯ ಸಂಸ್ಥೆಗಳು ಸಂಗ್ರಹಿಸುತ್ತಿರುವ ಸೆಸ್‌ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ₹400 ಕೋಟಿ ಹತ್ತು ವರ್ಷಗಳಿಂದ ಬಳಕೆಯಾಗಿಲ್ಲ. ಈ ಹಣವನ್ನು ಬಳಸಿಕೊಂಡು ಭಿಕ್ಷುಕರಿಗೆ ಪುನರ್ವಸತಿ ಕಲ್ಪಿಸಬೇಕು’ ಎಂದು ಗೋವಿಂದ ರಾಜು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT