ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಾಜಿಗೆ ಮಸಿ, ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದು ಕಾಂಗ್ರೆಸ್‌ನವರು: ಬಿಜೆಪಿ

ರಾಜ್ಯ ಬಿಜೆಪಿ ಘಟಕ ಸರಣಿ ಟ್ವೀಟ್ ಮಾಡಿ ಆರೋಪ
Last Updated 19 ಡಿಸೆಂಬರ್ 2021, 6:40 IST
ಅಕ್ಷರ ಗಾತ್ರ

ಬೆಂಗಳೂರು: ‘ಮಹಾರಾಷ್ಟ್ರದಲ್ಲಿ ಪುಂಡರೊಂದಿಗೆ ಸೇರಿಕೊಂಡು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರು.ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಮಿತ್ರಪಕ್ಷ ಎಂಇಎಸ್.ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರು.ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶವಾಗಿದೆ’ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.

ಇಂದು ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಬೆಳಗಾವಿ ವಿವಾದ ಹಾಗೂ ಶಿವಾಜಿ, ರಾಯಣ್ಣ ಪ್ರತಿಮೆಗೆ ಮಸಿ ಬಳಿದಿರುವುದು ಕಾಂಗ್ರೆಸ್ ಕಾರ್ಯಕರ್ತರು ಎಂದು ನೇರ ಆರೋಪ ಮಾಡಿದೆ.‘ಡಿ.ಕೆ ಶಿವಕುಮಾರ್ ಅವರೇ ನಿಮ್ಮ ಹೋರಾಟಕ್ಕೆ ಜನ ಬೆಂಬಲ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಚು ರೂಪಿಸುತ್ತಿದ್ದೀರಾ?ಭಾಷೆ ಹಾಗೂ ಸ್ವಾತಂತ್ರ್ಯ ವೀರರಿಗೆ ಅಪಮಾನ ಮಾಡುವ ಷಡ್ಯಂತ್ರ ರೂಪುಗೊಂಡಿದ್ದು ಕಾಂಗ್ರೆಸ್ ವಾರ್ ರೂಮಿನಲ್ಲೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಬಿಜೆಪಿ ಪ್ರಶ್ನಿಸಿದೆ.

‘ಭಾಷೆ ಹಾಗೂ ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ಹವಣಿಸುತ್ತಿದೆ.ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂದು ಸಿದ್ದರಾಮಯ್ಯ ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ’ ಎಂದು ಬಿಜೆಪಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT