ಬೆಂಗಳೂರು: ಬೆಳಗಾವಿ ಜಿಲ್ಲೆಯ ಬಡಾಲ ಅಂಕಲಗಿಯಲ್ಲಿ ಗೋಡೆ ಕುಸಿದು ಮೃತಪಟ್ಟ 7 ಮಂದಿಯ ಕುಟುಂಬಕ್ಕೆ ತಲಾ ₹ 2 ಪರಿಹಾರವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಕಚೇರಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ.
ಕರ್ನಾಟಕದ ಬೆಳಗಾವಿಯಲ್ಲಿ ಮನೆ ಕುಸಿದು ಜೀವ ಹಾನಿ ಸಂಭವಿಸಿದ ಸುದ್ದಿ ಹೇಳಿ ಅತೀವ ದುಃಖವಾಗಿದೆ. ದುಃಖತಪ್ತ ಕುಟುಂಬ ಸದಸ್ಯರ ಜೊತೆ ನಾನಿದ್ದೇನೆ. ಮೃತರ ಸಂಬಂಧಿಕರಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ತಲಾ ₹ 2 ಲಕ್ಷ ಪರಿಹಾರ ನೀಡುವುದಾಗಿ ಟ್ವೀಟ್‌ನಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರವು ಸಹ ಮೃತರ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ ಘೋಷಿಸಿದೆ.
ಬುಧವಾರ ಸಂಜೆ ಬೆಳಗಾವಿ ತಾಲ್ಲೂಕಿನ ಬಡಾಲ ಅಂಕಲಗಿಯಲ್ಲಿ ಮನೆಯ ಗೋಡೆ ಕುಸಿದು ಇಬ್ಬರು ಬಾಲಕಿಯರು ಸೇರಿದಂತೆ 7 ಮಂದಿ ಸಾವಿಗೀಡಾಗಿದ್ದರು.
ಅರ್ಜುನ ಹನುಮಂತ ಖನಗಾಂವಿ (48), ಪತ್ನಿ ಸತ್ಯವ್ವ ಖನಗಾಂವಿ (45), ಪುತ್ರಿ ಲಕ್ಷ್ಮಿ ಖನಗಾಂವಿ (17), ಪೂಜಾ ಅರ್ಜುನ ಖನಗಾಂವಿ (8), ಗಂಗವ್ವ ಭೀಮಪ್ಪ ಖನಗಾಂವಿ (50), ಸವಿತಾ ಭೀಮಪ್ಪ ಖನಗಾಂವಿ (28) ಮತ್ತು ಕಾಶವ್ವ ವಿಠ್ಠಲ ಕೊಳಪ್ಪನವರ (8) ಮೃತರು. ಐವರು ಸ್ಥಳದಲ್ಲಿ ಹಾಗೂ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಳೆಯ ಮನೆಯ ಚಾವಣಿ ತೆಗೆದು ಹೊಸದಾಗಿ ಹಾಕುವ ಸಿದ್ಧತೆಯನ್ನು ಮನೆಯವರು ಮಾಡಿಕೊಂಡಿದ್ದರು. ಪಕ್ಕದಲ್ಲಿ ಹಾಕಿದ್ದ ತಗಡಿನ ಶೆಡ್‌ನಲ್ಲಿ ಇದ್ದರು. ಮಳೆ ಬೀಳುತ್ತಿದ್ದ ವೇಳೆ, ಪಕ್ಕದಲ್ಲಿದ್ದ ಶಿಥಿಲಗೊಂಡಿದ್ದ ಗೋಡೆ ಅವರ ಮೇಲೆ ಕುಸಿದಿತ್ತು.
ಭೀಮಪ್ಪ ಜೊತೆ ಮಾತನಾಡಿದ ಸಿ.ಎಂ:ದುರಂತದಲ್ಲಿ ಬದುಕುಳಿದ ಭೀಮಪ್ಪ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೊಬೈಲ್ ಫೋನ್‌ನಲ್ಲಿ ಮಾತನಾಡಿ ಸಾಂತ್ವನ ಹೇಳಿದ್ದರು.
‘ಸರ್ಕಾರ ನಿನ್ನ ಜೊತೆಗಿರುತ್ತದೆ. ಮೃತರಾದವರ ಅಂತ್ಯಸಂಸ್ಕಾರಕ್ಕೆ ಎಲ್ಲ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ತಕ್ಷಣವೇ ಪರಿಹಾರದ ಹಣವನ್ನು (ತಲಾ ₹5 ಲಕ್ಷ) ತಲುಪಿಸಲಾಗುವುದು. ಯಾವುದೇ ಕಾರಣಕ್ಕೂ ಧೃತಿಗೆಡಬೇಡ’ ಎಂದು ಅಭಯ ನೀಡಿದ್ದರು.
ಇದನ್ನೂ ಓದಿ.. ಹಿರೇಬಾಗೇವಾಡಿ: ಭಾರಿ ಮಳೆಯಿಂದಾಗಿ ಮನೆ ಕುಸಿದು 7 ಮಂದಿ ಸಾವು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.