ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದ ಇತ್ಯರ್ಥವಾಗುವವರೆಗೆ ಕೇಂದ್ರ ಸರ್ಕಾರ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು. ಇಲ್ಲದಿದ್ದರೆ, ಗಡಿ ಭಾಗದ ಮರಾಠಿ ಭಾಷಿಕರಿಗೆ ಮರಾಠಿಯಲ್ಲೇ ಸರ್ಕಾರಿ ದಾಖಲೆಗಳನ್ನು ನೀಡಬೇಕು ಎಂದು ತಾಲ್ಲೂಕಿನ ಬೆಳಗುಂದಿಯಲ್ಲಿ ರವಳನಾಥ ಪಂಚಕ್ರೋಶಿ ಸಾಹಿತ್ಯ ಅಕಾಡೆಮಿ ವತಿಯಿಂದ ಭಾನುವಾರ ನಡೆದ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಣಯ ಅಂಗೀಕರಿಸಲಾಯಿತು.
‘ಗಡಿಭಾಗದ ಮರಾಠಿ ಭಾಷಿಕರು ತಮ್ಮನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಹಲವು ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ಮರಾಠಿ ಸಾಹಿತ್ಯ ಸಮ್ಮೇಳನಗಳ ಬೆಂಬಲವೂ ಇದೆ. ಹೀಗಾಗಿ, ಮಹಾರಾಷ್ಟ್ರ ಸರ್ಕಾರ ಪ್ರತಿವರ್ಷ ಮರಾಠಿ ಸಾಹಿತ್ಯ ಸಮ್ಮೇಳನಗಳಿಗೆ ಅನುದಾನ ನೀಡಬೇಕು’ ಎಂದು ಒತ್ತಾಯಿಸಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.