ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

4,244 ಅಂಗನವಾಡಿ ಕೇಂದ್ರ ಸ್ಥಾಪನೆ: ಹಾಲಪ್ಪ ಆಚಾರ್

Last Updated 23 ಡಿಸೆಂಬರ್ 2022, 22:01 IST
ಅಕ್ಷರ ಗಾತ್ರ

ಬೆಳಗಾವಿ: ರಾಜ್ಯದಲ್ಲಿ ಹೊಸದಾಗಿ 4,244 ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.

ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಆನಂದ ನ್ಯಾಮೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಕ್ರಮ ವಹಿಸಲಾಗುವುದು ಎಂದರು.

ಕಡಿಮೆ ಆದಾಯದ ಜನಸಂಖ್ಯೆ ಹೆಚ್ಚಾಗಿ ವಾಸಿಸುತ್ತಿರುವ ಮತ್ತು ಭೂರಹಿತ ಕಾರ್ಮಿಕರನ್ನು ಒಳಗೊಂಡಿರುವ ಗ್ರಾಮಾಂತರ ಪ್ರದೇಶದಲ್ಲಿ 1655 ಮತ್ತು ನಗರ ಪ್ರದೇಶಗಳಲ್ಲಿ 2589 ಅಂಗನವಾಡಿ ಕೇಂದ್ರಗಳನ್ನು ತೆರೆಯಲಾಗುತ್ತದೆ. ವಿವಿಧ ಜಿಲ್ಲೆಗಳಿಂದ 3538 ಅಂಗನವಾಡಿಗಳ ಸ್ಥಾಪನೆಗೆ ಬೇಡಿಕೆ ಬಂದಿದೆ ಎಂದರು.

ಸ್ಥಳೀಯ ಶಾಲಾ ಕಟ್ಟಡ, ಸಮುದಾಯ ಭವನ, ಸಂಘ–ಸಂಸ್ಥೆಗಳ ಜಾಗಗಳಿದ್ದರೆ ಅವುಗಳನ್ನು ಬಳಸಿಕೊಂಡು, ಸ್ಥಳೀಯರನ್ನೇ ಬಳಸಿ ಅಂಗನವಾಡಿ ಆರಂಭಿಸಲಾಗುವುದು. ಆ ಬಳಿಕ ನೇಮಕ ಪ್ರಕ್ರಿಯೆ ನಡೆಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

41 ತಾಲ್ಲೂಕುಗಳಲ್ಲಿ ಸಿಡಿಪಿಒ:ರಾಜ್ಯದ 41 ಹೊಸ ತಾಲ್ಲೂಕುಗಳಲ್ಲಿ ಶಿಶು ಅಭಿವೃದ್ಧಿ ಯೋಜನೆ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
ಸಲ್ಲಿಸಿರುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT