ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಶಾಸಕ ಬೆಳ್ಳಿ ಪ್ರಕಾಶ್ ಆಯ್ಕೆ

ಬೆಂಗಳೂರು: ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಕಡೂರು ಶಾಸಕ ಕೆ.ಎಸ್. ಬೆಳ್ಳಿ ಪ್ರಕಾಶ್ ಮತ್ತು ಉಪಾಧ್ಯಕ್ಷರಾಗಿ ಮೈಸೂರಿನ ಶಾಸಕ ಜಿ.ಟಿ. ದೇವೇಗೌಡರ ಮಗ ಜಿ.ಡಿ. ಹರೀಶ್ ಗೌಡ ಅವಿರೋಧ ಆಯ್ಕೆಯಾಗಿದ್ದಾರೆ.
19 ನಿರ್ದೇಶಕರನ್ನು ಒಳಗೊಂಡಿರುವ ಅಪೆಕ್ಸ್ ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಿತು. ಬೆಳ್ಳಿ ಪ್ರಕಾಶ್ ಮತ್ತು ಹರೀಶ್ ಗೌಡ ಮಾತ್ರ ನಾಮಪತ್ರ ಸಲ್ಲಿಸಿದರು. ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಅನಿಲ್‌ಕುಮಾರ್ ಘೋಷಿಸಿದರು.
ಹಿಂದಿನ ಅವಧಿಯಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎನ್. ರಾಜಣ್ಣ ಅಧ್ಯಕ್ಷರಾಗಿದ್ದು, ಬಳ್ಳಾರಿಯ ಚಂದ್ರಶೇಖರ್ ಉಪಾಧ್ಯಕ್ಷರಾಗಿದ್ದರು. ಆಡಳಿತ ಮಂಡಳಿ ಸದಸ್ಯರ ಅಧಿಕಾರದ ಅವಧಿ 2020ರ ಜುಲೈನಲ್ಲಿ ಅಂತ್ಯಗೊಂಡಿತ್ತು. ಆ ಬಳಿಕ ಬೆಂಗಳೂರು ಪ್ರಾದೇಶಿಕ ಆಯುಕ್ತರು ಅಪೆಕ್ಸ್ ಬ್ಯಾಂಕ್‌ನ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬೆಳ್ಳಿಪ್ರಕಾಶ್ ಮತ್ತು ಹರೀಶ್ ಗೌಡ ಮಂಗಳವಾರವೇ ಅಧಿಕಾರ ಸ್ವೀಕರಿಸಿದ್ದರು, ಮುಂದಿನ ಐದು ವರ್ಷಗಳ ಅವಧಿಗೆ ಬ್ಯಾಂಕ್‌ನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.