ಬುಧವಾರ, ಸೆಪ್ಟೆಂಬರ್ 23, 2020
27 °C

ಬೆಂಗಳೂರು ಗಲಭೆ: ಕಾರ್ಪೋರೇಟರ್ ಪತಿ ಸೇರಿ 206 ಮಂದಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ನಡೆದ ಗಲಭೆ ಸಂಬಂಧ ಕಾರ್ಪೊರೇಟರ್ ಇರ್ಷಾದ್ ಬೇಗಂ ಅವರ ಪತಿ ಕಲೀಂ ಪಾಷ ಸೇರಿದಂತೆ 60 ಮಂದಿಯನ್ನು ಗುರುವಾರ ರಾತ್ರಿ ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 206ಕ್ಕೆ ಏರಿದೆ.

'ಗಲಭೆ ಪ್ರಕರಣದ ಆರೋಪಿಗಳ ಬಂಧನ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಸದ್ಯಕ್ಕೆ ಕಲೀಂ ಪಾಷಾ ಸೇರಿದಂತೆ 206 ಮಂದಿ ಸೆರೆ ಸಿಕ್ಕಿದ್ದಾರೆ. ಮತ್ತಷ್ಟು ಮಂದಿಯನ್ನು ಬಂಧಿಸಬೇಕಿದೆ' ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.

ಗಲಭೆ ನಡೆಯಲು ಪ್ರಚೋದನೆ ನೀಡಿದ ಆರೋಪ ಕಲೀಂ ಪಾಷ ಮೇಲಿದೆ. ಬಂಧಿತರನ್ನು ವೈದ್ಯಕೀಯ ಹಾಗೂ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅದರ ವರದಿ ಬಂದ ನಂತರ ನ್ಯಾಯಾಲಯದ ಅನುಮತಿ ಪಡೆದು ಕೆಲ ಆರೋಪಿಗಳನ್ನು ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

ಗಲಭೆ ಪ್ರಕರಣದ ತನಿಖೆಯನ್ನು ಈಗಾಗಲೇ ಸಿಸಿಬಿಗೆ ವಹಿಸಲಾಗಿದೆ. ನಾಲ್ಕು ವಿಶೇಷ ತಂಡಗಳು ಆರೋಪಿಗಳ ಪತ್ತೆಗೆ ಬಲೆ ಬೀಸಿವೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು