ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಜೆ.ಹಳ್ಳಿ ಗಲಭೆ: ಸಿಎಂ ಭೇಟಿ ಮಾಡಿದ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌

Last Updated 12 ಆಗಸ್ಟ್ 2020, 11:05 IST
ಅಕ್ಷರ ಗಾತ್ರ

ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆಗೆ ಕಾರಣರಾದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುವುದರ ಜತೆಗೆ, ಹೆಚ್ಚು ಸಿಬ್ಬಂದಿ ನಿಯೋಜಿಸಿ ಗಲಭೆ ನಿಯಂತ್ರಣಕ್ಕೆ ತರಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಪ್ರವೀಣ್‌ ಸೂದ್‌ ಅವರಿಗೆ ನಿರ್ದೇಶನ ನೀಡಿದ್ದಾರೆ.

ಮಂಗಳವಾರ ರಾತ್ರಿಯಿಂದ ಆಗಿರುವ ಬೆಳವಣಿಗೆಗಳ ಬಗ್ಗೆ ಪ್ರವೀಣ್‌ ಸೂದ್‌ ಅವರು ಮುಖ್ಯಮಂತ್ರಿ ಅವರಿಗೆ ವಿವರ ನೀಡಿದರು.

ತಕ್ಷಣವೇ ಅಗತ್ಯವಿರುವಷ್ಟು ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಬೇಕು. ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡು ಪರಿಸ್ಥಿತಿಯನ್ನು ನಿಯಂತ್ರಿಸಬೇಕು. ಅಲ್ಲದೆ, ಸ್ಥಳೀಯ ಮುಸ್ಲಿಮ್ ಮುಖಂಡರ ಜತೆಗೂ ಮಾತುಕತೆ ನಡೆಸುವಂತೆಯೂ ಯಡಿಯೂರಪ್ಪ ಸೂಚಿಸಿದರು.

ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ ಅವರೂ ಬೆಳಿಗ್ಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ, ಘಟನೆಯ ಸಂಪೂರ್ಣ ವಿವರ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT