ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಕಾರ್ಯಕರ್ತೆಯರಿಂದ ‘ಬೆಂಗಳೂರು ಚಲೋ’

Last Updated 26 ಆಗಸ್ಟ್ 2021, 21:45 IST
ಅಕ್ಷರ ಗಾತ್ರ

ಬೆಂಗಳೂರು: ‘ವಿವಿಧ ಬೇಡಿಕೆಗಳ ಈಡೇರಿಕೆಗಾಗಿಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ (ಎಐಟಿಯುಸಿ) ವತಿಯಿಂದ ಸೆಪ್ಟೆಂಬರ್ 2ರಂದು ‘ಬೆಂಗಳೂರು ಚಲೋ’ ಹಮ್ಮಿಕೊಳ್ಳಲಾಗಿದೆ’ ಎಂದು ರಾಜ್ಯಾಧ್ಯಕ್ಷ ಎನ್‌.ಶಿವಣ್ಣ ತಿಳಿಸಿದ್ದಾರೆ.

‘ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ಧಾನ್ಯಗಳನ್ನು ವಿತರಿಸುವ ಬದಲು ಅದಕ್ಕೆ ತಗಲುವ ಮೊತ್ತವನ್ನು ಮಕ್ಕಳ ಖಾತೆಗೆ ಜಮೆ ಮಾಡಲು ಸರ್ಕಾರ ಚಿಂತನೆ ನಡೆಸಿರುವುದಾಗಿ ಹೇಳಲಾಗುತ್ತಿದೆ. ಹಾಗೊಮ್ಮೆ ಆದರೆ ಐಸಿಡಿಎಸ್‌ ಯೋಜನೆ ಹಾಳು ಮಾಡಿದಂತಾಗುತ್ತದೆ. ಹೀಗಾಗಿ ಈ ಚಿಂತನೆಯನ್ನು ಸರ್ಕಾರ ಕೈಬಿಡಬೇಕು. ಸೇವಾ ಹಿರಿತನದ ಆಧಾರದಲ್ಲಿ ಗೌರವ ಧನ ಹೆಚ್ಚಿಸಬೇಕು. ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಫೆಡರೇಷನ್‌ನ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ‘ಪಿಂಚಣಿ, ಭವಿಷ್ಯ ನಿಧಿ, ಇಎಸ್‌ಐ ಸೇರಿದಂತೆ ಇತರೆ ಸೌಕರ್ಯಗಳನ್ನು ಕಲ್ಪಿಸಬೇಕು. ಪೋಷಣ್‌ ಅಭಿಯಾನದ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳ ಮಾಹಿತಿಯನ್ನು ಒಂದೇ ಆ್ಯಪ್‌ನಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಬೇಕು. ನಿವೃತ್ತರಾದವರಿಗೆ ಇಡಿಗಂಟು ಹಣ ಬಿಡುಗಡೆ ಮಾಡಬೇಕು. ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಿಸಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT