ಬೆಂಗಳೂರು: ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸೆ.2ರಿಂದ 5ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 2, 3 ಮತ್ತು 5 ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಳೆಯ ಪ್ರಮಾಣ ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರುಗಳಲ್ಲಿ ಬುಧವಾರ ಗುಡುಗು ಸಹಿತ ಮಳೆ ಸುರಿಯುವ ಸೂಚನೆ ಇರುವುದರಿಂದ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.