ಗುರುವಾರ , ಆಗಸ್ಟ್ 18, 2022
26 °C

ಪ್ರಧಾನಿ ಕಾರ್ಯಕ್ರಮ ಭದ್ರತೆಗೆ ನಿಯೋಜಿಸಿದ್ದ PSI ಸುದರ್ಶನ್ ಶೆಟ್ಟಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್‌ಐ ಸುದರ್ಶನ್ ಶೆಟ್ಟಿ (51) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಹನುಮಂತನಗರ ಠಾಣೆ ಪಿಎಸ್‌ಐ ಆಗಿದ್ದ ಸುದರ್ಶನ್‌ ಅವರನ್ನು ಕೆಲ ತಿಂಗಳ ಹಿಂದೆಯಷ್ಟೇ ನಿಯೋಜನೆ ಮೇರೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾಯಿಸಲಾಗಿತ್ತು. ಅವರ ಆತ್ಮಹತ್ಯೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಭದ್ರತೆಗಾಗಿ ಸುದರ್ಶನ್ ಅವರನ್ನು ನಿಯೋಜಿಸಲಾಗಿತ್ತು. ತಮಗೆ ಹುಷಾರಿಲ್ಲವೆಂದು ಹೇಳಿ ಕರ್ತವ್ಯಕ್ಕೆ ಗೈರಾಗಿದ್ದ ಅವರು, ಯಶವಂತಪುರದಲ್ಲಿರುವ ಮನೆಯಲ್ಲಿ ಉಳಿದುಕೊಂಡಿದ್ದರು.’

‘ವಿಶ್ವ ಅಪ್ಪಂದಿರ ದಿನವಾಗಿದ್ದರಿಂದ, ಸುದರ್ಶನ್ ಅವರಿಗೆ ಮಗ ಶುಭಾಶಯ ತಿಳಿಸಿದ್ದರು. ಧನ್ಯವಾದ ತಿಳಿಸಿ ಮಗನ ಜೊತೆ ಕಾಲ ಕಳೆದಿದ್ದ ಸುದರ್ಶನ್, ಕೊಠಡಿಯೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಮಲಗಲು ಹೋಗಿರಬಹುದೆಂದು ಮಗ ಸುಮ್ಮನಾಗಿದ್ದರು. ಕೆಲ ಹೊತ್ತಿನ ನಂತರ ಹೊರಗೆ ಬಂದಿರಲಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು