ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಶಪಥವಲ್ಲ ಭ್ರಷ್ಟಪಥ: Bengaluru-Mysuru Expressway ಬಗ್ಗೆ ಕಾಂಗ್ರೆಸ್‌ ಟೀಕೆ

ಪ್ರಜಾವಾಣಿ ವರದಿ ಉಲ್ಲೇಖಿಸಿ ಕಾಂಗ್ರೆಸ್‌ ಆಕ್ರೋಶ
Last Updated 15 ಮಾರ್ಚ್ 2023, 9:24 IST
ಅಕ್ಷರ ಗಾತ್ರ

ಬೆಂಗಳೂರು: ಉದ್ಘಾಟನೆಯಾದ ಮರುದಿನವೇ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿನ ಡಾಂಬರು ಕಿತ್ತು ಬಂದಿದ್ದು, ಇದು ದಶಪಥವಲ್ಲ ಭ್ರಷ್ಟಪಥ ಎಂದು ಕಾಂಗ್ರೆಸ್ ಟೀಕಿಸಿದೆ.

‘ಉದ್ಘಾಟನೆಯಾದ ಮರುದಿನವೇ ಕಿತ್ತು ಬಂದ ದಶಪಥ‘ ಎನ್ನುವ ‘ಪ‍್ರಜಾವಾಣಿ‘ಯ ವರದಿಯನ್ನು ಉಲ್ಲೇಖಿಸಿ ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

ರಾಜ್ಯ ಸರ್ಕಾರದ ಶೇ 40 ಹಾಗೂ ಕೇಂದ್ರ ಸರ್ಕಾರ ಶೇ 40 ಒಟ್ಟು ಶೇ 80 ಕಮೀಷನ್‌ ಕಾಮಗಾರಿಯ ಬಂಡವಾಳ ಇದರಿಂದ ಬಯಲಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ.

ಕಾಂಗ್ರೆಸ್‌ ಮಾಡಿರುವ ಟ್ವೀಟ್‌ ಹೀಗಿದೆ–

‘ಅಭಿನಂದನೆಗಳು ನರೇಂದ್ರ ಮೋದಿ ಅವರೇ. ಒಂದು ವರ್ಷವಾದರೂ ಬಾಳಿಕೆ ಬರಬೇಕಿತ್ತು, ಒಂದು ತಿಂಗಳು, ಕೊನೆ ಪಕ್ಷ ಒಂದು ವಾರವಾದರೂ ಬಾಳಿಕೆ ಬರಬೇಕಿತ್ತು. ಆದರೆ ಉದ್ಘಾಟನೆಯಾದ ಒಂದೇ ದಿನಕ್ಕೆ ಕಿತ್ತು ಹೋಗಿದೆ, ರಾಜ್ಯದ 40% ಕೇಂದ್ರದ 40%, ಒಟ್ಟು 80% ಕಮಿಷನ್ ಕಾಮಗಾರಿಯ ಬಂಡವಾಳ ಹೊರಬಂದಿದೆ.ದಶಪಥವಲ್ಲ ಇದು ಭ್ರಷ್ಟಪಥ‘ ಎಂದು ಕಾಂಗ್ರೆಸ್‌ ಟೀಕೆ ಮಾಡಿದೆ.

ಕಿತ್ತುಹೋದ ರಸ್ತೆ ದುರಸ್ತಿ ಕಾಮಗಾರಿಯ ಗುದ್ದಲಿ ಪೂಜೆಗೆ ಮತ್ತೊಮ್ಮೆ ಮೋದಿಯನ್ನು ಕರೆಸಿ. ದುರಸ್ತಿಯಾದ ನಂತರ ಉದ್ಘಾಟನೆಗೆ ಇನ್ನೊಮ್ಮೆ ಮೋದಿ ಕರೆಸಿ.ಗುಂಡಿ ಮುಚ್ಚಿದ ಸಂತೋಷಕ್ಕಾಗಿ ಮಗದೊಮ್ಮೆ ಮೋದಿ ಕರೆಸಿ ರೋಡ್ ಶೋ ಮಾಡಿಸಿ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT