ಸೋಮವಾರ, ಮಾರ್ಚ್ 27, 2023
22 °C

ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ; ಪ್ರಯಾಣಿಕರ ಜೀವ ಪಣಕ್ಕಿಟ್ಟ ಬಿಜೆಪಿ:ಡಿಕೆಶಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರಸ್ತೆಯಲ್ಲಿ ನೀರು ಕಟ್ಟಿಕೊಂಡಿದ್ದು, ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ. 

ಈ ಅವ್ಯವಸ್ಥೆ ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಯಾಣಿಕರ ಜೀವವನ್ನು ಬಿಜೆಪಿ ಪಣಕ್ಕಿಟ್ಟಿದೆ ಎಂದು ಆರೋಪಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಂಗಳೂರು-ಮೈಸೂರು ದಶಪಥ ರಸ್ತೆ ಕ್ರೆಡಿಟ್ ತೆಗೆದುಕೊಳ್ಳುತ್ತಿರುವ ಪುಣ್ಯಾತ್ಮರೆಲ್ಲ ಹೆದ್ದಾರಿಯು ಜಲಾವೃತವಾಗಿರುವ ಬಗ್ಗೆ ಮಾತನಾಡಬೇಕು. ದುಬಾರಿ ಟೋಲ್ ಮಾತ್ರ ಬೇಕು ಆದರೆ ಅದಕ್ಕೆ ತಕ್ಕ ಸೇವೆ ಒದಗಿಸುವುದು ಸಾಧ್ಯವಿಲ್ಲ. ಪ್ರಯಾಣಿಕರ ಜೀವವನ್ನು ಬಿಜೆಪಿಯ 40% ವ್ಯವಹಾರ ಪಣಕ್ಕಿಟ್ಟಿದೆ. ಭ್ರಷ್ಟಾಚಾರ ಬಿಟ್ಟರೆ ನಿಮ್ಮ ಕೊಡುಗೆ ಏನಿದೆ? ಎಂದು ಪ್ರಶ್ನೆ ಮಾಡಿದ್ದಾರೆ. 

ಸಿಎಂ ಪ್ರತಿಕ್ರಿಯೆ...
ಈ ನಡುವೆ ಹೇಳಿಕೆ ಕೊಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಳೆ ಬಂದಾಗ ಸಣ್ಣ ಪುಟ್ಟ ಸಮಸ್ಯೆಗಳಾಗುವುದು ಸಹಜ. ರಾಮನಗರದ ಬಳಿ ಮೈಸೂರು-ಬೆಂಗಳೂರು ಹೆದ್ದಾರಿಯ ಅಂಡರ್ ಪಾಸ್‌ನಲ್ಲಿ ಮಳೆ ನೀರು ನಿಂತು ಉಂಟಾಗಿರುವ ಸಮಸ್ಯೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸರಿ ಮಾಡಲಿದೆ ಎಂದು ಹೇಳಿದ್ದಾರೆ. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು