ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ಅಕ್ರಮ: ಹೆಡ್‌ಕಾನ್‌ಸ್ಟೆಬಲ್ ಸೇರಿ ಮೂವರು ವಶಕ್ಕೆ

Last Updated 6 ಜೂನ್ 2022, 11:47 IST
ಅಕ್ಷರ ಗಾತ್ರ

ಬೆಂಗಳೂರು: ಪಿಎಸ್‌ಐ ಅಕ್ರಮ ಪ್ರಕರಣ ಸಂಬಂಧ ಹೆಡ್‌ಕಾನ್‌ಸ್ಟೆಬಲ್‌ ಸೇರಿದಂತೆ ಮೂವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದು, ಅರಮನೆ ರಸ್ತೆಯಲ್ಲಿರುವ ಮುಖ್ಯ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

‘ಕಲಾಸಿಪಾಳ್ಯ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಹರೀಶ್, ನೆಲಮಂಗಲ ಪೊಲೀಸ್ ಠಾಣೆ ಕಾನ್‌ಸ್ಟೆಬಲ್ ಮೋಹನ್‌‌ ಕುಮಾರ್ ಹಾಗೂ ಅಭ್ಯರ್ಥಿ ದರ್ಶನ್ ಗೌಡ ಅವರನ್ನು ವಶಕ್ಕೆ ಪಡೆಯಲಾಗಿದೆ.

ಕೆಲ ಪುರಾವೆಗಳನ್ನು ಮುಂದಿಟ್ಟು ವಿಚಾರಣೆ ನಡೆಸಲಾಗುತ್ತಿದ್ದು, ಹೇಳಿಕೆ ಪಡೆದ ನಂತರವೇ ಮುಂದಿನ ಕ್ರಮಎಂದು ಸಿಐಡಿ ಮೂಲಗಳು ಹೇಳಿವೆ.

‘ಅಕ್ರಮ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಮೊದಲ ಎಫ್‌ಐಆರ್ ದಾಖಲಾಗಿತ್ತು. ಇದೀಗ, ರಾಮಮೂರ್ತಿನಗರ ಠಾಣೆಯಲ್ಲೂ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಇದೇ ಪ್ರಕರಣದಲ್ಲಿ ಹರೀಶ್ ಆರೋಪಿ ಆಗಿದ್ದಾನೆ. ಒಎಂಆರ್ ಕಾರ್ಬನ್ ಪ್ರತಿ ಸಮೇತ ಒಂದು ಬಾರಿ ವಿಚಾರಣೆಗೆ ಬಂದಿದ್ದ ದರ್ಶನ್ ಗೌಡ, ಆ ನಂತರ ತಲೆಮರೆಸಿಕೊಂಡಿದ್ದ. ಇದೀಗ ಆತನನ್ನು ಪತ್ತೆ ಮಾಡಲಾಗಿದೆ’ ಎಂದೂ ತಿಳಿಸಿವೆ.

‘ಮಧ್ಯವರ್ತಿಗಳ ಮೂಲಕ ಹಣ ನೀಡಿದ್ದ ದರ್ಶನ್ ಗೌಡ, ಪಿಎಸ್ಐ ಹುದ್ದೆಗೆ ಅಕ್ರಮವಾಗಿ ಆಯ್ಕೆಯಾಗಿದ್ದ. ಆತನ ಒಎಂಆರ್ ಪ್ರತಿ ಪರಿಶೀಲನೆ ನಡೆಸಿದಾಗ, ವ್ಯತ್ಯಾಸ ಕಂಡುಬಂದಿತ್ತು’ ಎಂದು ಸಿಐಡಿ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT