ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಗಲಭೆ ನಡೆದದ್ದು ಕಾಂಗ್ರೆಸ್‌ ಕಾರ್ಯಕರ್ತರಿಂದಲೆ: ಡಿಸಿಎಂ ಸವದಿ ಅರೋಪ

Last Updated 18 ಆಗಸ್ಟ್ 2020, 12:25 IST
ಅಕ್ಷರ ಗಾತ್ರ

ಬೆಳಗಾವಿ: ‘ಬೆಂಗಳೂರಿನಲ್ಲಿ ಗಲಭೆ ನಡೆದದ್ದು ಕಾಂಗ್ರೆಸ್‌ ಕಾರ್ಯಕರ್ತರಿಂದಲೇ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ದೂರಿದರು.

ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗಲಭೆಯನ್ನು ಹುಟ್ಟು ಹಾಕಿದ್ದು ಕಾಂಗ್ರೆಸ್‌ನವರು. ಹೀಗಾಗಿ, ಅದನ್ನು ಮುಚ್ಚಿ ಹಾಕಲು ಆಡಳಿತ ಪಕ್ಷದ ಮೇಲೆ ಆರೋಪ ಮಾಡುತ್ತಿದ್ದಾರೆ. ಸರ್ಕಾರದ ಮೇಲೆ ಗೂಬೆ ಕೂರಿಸಲು ಕಾಂಗ್ರೆಸ್ ಹುನ್ನಾರ ಮಾಡುತ್ತಿದೆ’ ಎಂದು ಟೀಕಿಸಿದರು.

‘ಗೃಹ ಸಚಿವರು, ಪೊಲೀಸ್ ಇಲಾಖೆಯವರು ಉತ್ತಮವಾಗಿ ಕೆಲಸ ಮಾಡಿದ್ದರಿಂದ ಗಲಭೆ ಹತೋಟಿಗೆ ಬಂದಿತು. ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಲಿದೆ‌. ತಪ್ಪಿತಸ್ಥರ ಆಸ್ತಿ ಮುಟ್ಟುಗೋಲು ಹಾಕುವ ಸಂಬಂಧವೂ ಚರ್ಚೆ ನಡೆದಿದೆ’ ಎಂದರು.

‘ಎಸ್‌ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಬೇಕು ಎಂಬ ಒತ್ತಾಯ ಹಿಂದಿನಿಂದಲೂ ಇದೆ. ಹಲವು ವಿದ್ವಂಸಕ ಕೃತ್ಯಗಳನ್ನು ನಡೆಸಿರುವವರು ಅವರೇ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗುವುದು’ ಎಂದು ತಿಳಿಸಿದರು.

‘ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಪಕ್ಷದ ಅಧ್ಯಕ್ಷರನ್ನು ಭೇಟಿ ಆಗುವುದರಲ್ಲಿ ತಪ್ಪೇನಿಲ್ಲ. ಪಕ್ಷದ ಯಾರೂ ಬೇಕಾದರೂ ಭೇಟಿಯಾಗಿ ಸಮಾಲೋಚನೆ ನಡೆಸಬಹುದು. ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಲು ಸಚಿವರು ಹೋಗಿದ್ದರಷ್ಟೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ’ ಎಂದರು.

‘ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯಾವಾಗ ಬೇಕಾದರೂ ನಿರ್ಧಾರ ಕೈಗೊಳ್ಳಬಹುದು’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT