ಬುಧವಾರ, ಸೆಪ್ಟೆಂಬರ್ 23, 2020
27 °C

ಡಿ.ಜೆ. ಹಳ್ಳಿ ಗಲಭೆಯಲ್ಲಿ ಕಾಂಗ್ರೆಸ್‌ ಮುಖವಾಡ ಕಳಚಿದೆ: ಸಚಿವ ಡಾ.ಸುಧಾಕರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡಿ.ಜೆ. ಹಳ್ಳಿ ಹಾಗೂ ಕೆ.ಜೆ. ಹಳ್ಳಿಗಳಲ್ಲಿ ನಡೆದ ಗಲಭೆಯಲ್ಲಿ ಕಾಂಗ್ರೆಸ್‌ ಮುಖವಾಡ ಕಳಚಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್‌ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, 'ಡಿಜೆಹಳ್ಳಿ, ಕೆಜೆಹಳ್ಳಿ ಗಲಭೆಯಲ್ಲಿ ಕಾಂಗ್ರೆಸ್‌ ಪಕ್ಷದ ಮುಖವಾಡ ಕಳಚಿದೆ. ಕ್ರೌರ್ಯದ ಮನಃಸ್ಥಿತಿಯ ದ್ಯೋತಕವಾಗಿ ಪುಂಡಾಟಿಕೆ ಮೆರೆದಿದ್ದ ಬಿಬಿಎಂಪಿ ಸದಸ್ಯೆ ಇರ್ಷಾದ್ ಬೇಗಂ ಪತಿ‌ ಕಲೀಂ ಪಾಷರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೀಚಕರ ಹಡೆಮುರಿಕಟ್ಟುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಕಾಂಗ್ರೆಸ್‌ನವರಿಗೆ ಈಗಲಾದ್ರೂ ಸತ್ಯದ ಅರಿವಾಯಿತೇ' ಎಂದು ಟೀಕಾಪ್ರಹಾರ ನಡೆಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು