ಭಾನುವಾರ, ಅಕ್ಟೋಬರ್ 17, 2021
23 °C

ಅಭಿವೃದ್ಧಿ ಹೆಸರಲ್ಲಿ ಬಿಜೆಪಿ ಸರ್ಕಾರದಿಂದ ಲೂಟಿ: ಕಾಂಗ್ರೆಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯ ಸರ್ಕಾರ, ಬಿಬಿಎಂಪಿ, ನಗರೋತ್ಥಾನ ಯೋಜನೆ ಹಾಗೂ ಇತರ ಇಲಾಖೆಗಳಿಂದ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ನೂರಾರು ಕೋಟಿ ಅನುದಾನ ಬಿಡುಗಡೆಯಾಗುತ್ತಿದೆ. ಇದರ ಸದ್ವಿನಿಯೋಗ ಆಗುತ್ತಿಲ್ಲ. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ. ಅಭಿವೃದ್ಧಿ ಹೆಸರಲ್ಲಿ ಬಿಜೆಪಿ ಸರ್ಕಾರ ಲೂಟಿ ಮಾಡುತ್ತಿದೆ. ಅದೇ ಸರ್ಕಾರದ ಸಾಧನೆಯಾಗಿದೆ’ ಎಂದು ಕಾಂಗ್ರೆಸ್‌ ಮುಖಂಡರು ದೂರಿದ್ದಾರೆ.

ಬೇಗೂರಿನಲ್ಲಿ ನಡೆದ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮುಖಂಡರ ಸಭೆಯಲ್ಲಿ ಮುಖಂಡರು ಮಾತನಾಡಿದರು.

‘ಬಿಜೆ‍‍ಪಿಯ ಎಂ.ಕೃಷ್ಣಪ್ಪ, ಮೂರು ಬಾರಿ ಶಾಸಕರಾಗಿದ್ದಾರೆ. ಹೀಗಿದ್ದರೂ ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸಿಲ್ಲ. ಇದನ್ನು ಪ್ರಶ್ನಿಸಿದರೆ ಅಂತಹವರ ಮೇಲೆ ದೌರ್ಜನ್ಯ ನಡೆಸುತ್ತಾರೆ. ಇದಕ್ಕಾಗಿ ಪೊಲೀಸರು ಹಾಗೂ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಮುಖಂಡರು ಆರೋಪಿಸಿದರು. 

ಮುಖಂಡರಾದ ಆರ್.ಕೆ.ರಮೇಶ್, ಕೆಪಿಸಿಸಿ ಸದಸ್ಯ ವಿನೋದ್ ಮತ್ತು ಸಂಜಯ್‌, ಬೇಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಂತೋಣಿ ಕಿರಣ್‌, ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಧರ್ ಲಕ್ಷ್ಮಣ್, ಕುಮಾರ್, ಸಂಪತ್, ಇಂಟೆಕ್ ರಾಜ್ಯ ಕಾರ್ಯದರ್ಶಿ ಶ್ಯಾಮಣ್ಣರೆಡ್ಡಿ, ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಪಿಕಾ ರೆಡ್ಡಿ, ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ನಾಗರಾಜರೆಡ್ಡಿ, ಕಾಂಗ್ರೆಸ್ ರೈತ ಘಟಕದ ಅಧ್ಯಕ್ಷ ಆಂಜನಪ್ಪ ರೆಡ್ಡಿ, ಮುಖಂಡ ಕಮ್ಮನಹಳ್ಳಿ ಮಂಜು, ಬೇಗೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಾಜಮ್ಮ, ವಾರ್ಡ್ ಅಧ್ಯಕ್ಷರಾದ ರೂಪಾ ಹಾಗೂ ಪಲ್ಲವಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು