ರೈಲ್ವೆ ನೇಮಕಾತಿ; ವಂಚಕರ ಬಗ್ಗೆ ಇರಲಿ ಎಚ್ಚರ

ಹುಬ್ಬಳ್ಳಿ: 1.40 ಲಕ್ಷ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಭಾರತೀಯ ರೈಲ್ವೆ ಈ ತಿಂಗಳ 15ರಿಂದ ಚಾಲನೆ ನೀಡಲಿದ್ದು, ಕೆಲಸ ಕೊಡಿಸುವುದಾಗಿ ವಂಚಿಸುವವರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಲಾಗಿದೆ.
ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಕಂಪ್ಯೂಟರೀಕೃತವಾಗಿರಲಿದ್ದು, ಅರ್ಹತೆಯ ಆಧಾರದ ಮೇಲೆ ಆಯ್ಕೆ ನಡೆಯಲಿದೆ. ಹಣನೀಡಿ, ಪ್ರಭಾವ ಬೀರಿ ಅಥವಾ ಇನ್ಯಾವುದೇ ರೀತಿಯ ವಾಮ ಮಾರ್ಗದ ಮೂಲಕ ಕೆಲಸ ಕೊಡಿಸುವ ಸುಳ್ಳು ಭರವಸೆ ನೀಡುವ ವಂಚಕ ಮಧ್ಯವರ್ತಿಗಳ ಬಗ್ಗೆ ಅಭ್ಯರ್ಥಿಗಳು ಎಚ್ಚರಿಕೆಯಿಂದ ಇರಬೇಕು. ಕೆಲಸ ಪಡೆಯಲು ನಿಯಮಬಾಹಿರ ಕೃತ್ಯಗಳಲ್ಲಿ ತೊಡಗುವ ಅಭ್ಯರ್ಥಿಗಳನ್ನು ಆಯ್ಕೆ ಪ್ರಕ್ರಿಯೆಯಿಂದ ಅನರ್ಹಗೊಳಿಸಲಾಗುವುದು ಹಾಗೂ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದು ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
ಕೆಲಸ ಕೊಡಿಸುವ ಆಮಿಷವೊಡ್ಡಿದರೆ ಸಮೀಪದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ. ಯಾವುದೇ ರೀತಿಯ ಮಾಹಿತಿ ಹಾಗೂ ಸಂದೇಹ ನಿವಾರಣೆಗೆ ದೂರವಾಣಿ ಸಂಖ್ಯೆ 080 23330 0378 ಸಂಪರ್ಕಿಸಬಹುದು. enquiry.rrbsbc@gmail.com ಗೆ ಇ–ಮೇಲ್ ಮಾಡಬಹುದು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.