ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ್ ಜೋಡೊ ಪಾದಯಾತ್ರೆ: ಚಾಮುಂಡಿ ಬೆಟ್ಟಕ್ಕೆ‌ ರಾಹುಲ್ ಗಾಂಧಿ ಭೇಟಿ

Last Updated 3 ಅಕ್ಟೋಬರ್ 2022, 6:39 IST
ಅಕ್ಷರ ಗಾತ್ರ

ಮೈಸೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಲ್ಲಿನ ಚಾಮುಂಡಿ ಬೆಟ್ಟಕ್ಕೆ ಸೋಮವಾರ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಭಾರತ್ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ಅವರು, ಬಿಡುವಿನ‌ ಸಮಯದಲ್ಲಿ ಶ್ರೀರಂಗಪಟ್ಟಣದ ಬಳಿಯಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ವಾಹನದಲ್ಲಿ ಬಂದರು. ಅವರೊಂದಿಗೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ‌ ಸಿದ್ದರಾಮಯ್ಯ ಜೊತೆಗಿದ್ದರು.

ಕೊಡಗಿನಲ್ಲಿ ‌ವಿಶ್ರಾಂತಿ ಪಡೆಯುವುದಕ್ಕಾಗಿ ಬರುತ್ತಿರುವ ತಾಯಿ ಸೋನಿಯಾ ಗಾಂಧಿ ಅವರನ್ನು ಮಧ್ಯಾಹ್ನ ಇಲ್ಲಿನ ಮಂಡಕಳ್ಳಿ ವಿಮಾನನಿಲ್ದಾಣದಲ್ಲಿ ಬರಮಾಡಿಕೊಳ್ಳಲಿರುವ ರಾಹುಲ್, ಬಳಿಕ ಶ್ರೀರಂಗಪಟ್ಟಣಕ್ಕೆ ವಾಹನದಲ್ಲಿ ತೆರಳಿ ಅಲ್ಲಿಂದ ಪಾದಯಾತ್ರೆ ಮುಂದುವರಿಸಲಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT