ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ್‌ ಜೋಡೊ ಯಾತ್ರೆ, ವಿಧಾನಸಭೆ ಕಲಾಪದ ನಡುವೆಯೇ ಇ.ಡಿ ಸಮನ್ಸ್‌: ಡಿಕೆಶಿ ಬೇಸರ

Last Updated 15 ಸೆಪ್ಟೆಂಬರ್ 2022, 9:15 IST
ಅಕ್ಷರ ಗಾತ್ರ

ಬೆಂಗಳೂರು: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಸಮನ್ಸ್ ಜಾರಿ ಮಾಡಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಡಿ.ಕೆ.ಶಿವಕುಮಾರ್‌, ‘ಭಾರತ್‌ ಜೋಡೊ ಯಾತ್ರೆ ಹಾಗೂ ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇ.ಡಿ ನನಗೆ ಸಮನ್ಸ್‌ ನೀಡಿದೆ’ ಎಂದು ತಿಳಿಸಿದ್ದಾರೆ.

‘ನಾನು ಸಹಕರಿಸಲು ಸಿದ್ಧ. ಆದರೆ, ಈ ಸಮನ್ಸ್‌ ನೀಡಿರುವ ಸಮಯ ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ನನಗೆ ತೊಂದರೆಯಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದೆಹಲಿಯ ಸಫ್ದರ್‌ಜಂಗ್‌ ಎನ್‌ಕ್ಲೇವ್‌ನಲ್ಲಿರುವ ಶಿವಕುಮಾರ್ ಒಡೆತನದ ನಿವಾಸದಲ್ಲಿ ₹ 8.59 ಕೋಟಿ ನಗದು ದೊರೆತಿದ್ದರಿಂದ, ಐಪಿಸಿಯ ಸೆಕ್ಷನ್‌ 120 ‘ಬಿ’ ಅಡಿ ಪ್ರಕರಣ ದಾಖಲಿಸಲಾಗಿದೆ.

ಕನ್ಯಾಕುಮಾರಿಯಲ್ಲಿ ಆರಂಭಗೊಂಡು ಕಾಶ್ಮೀರದ ಶ್ರೀನಗರದಲ್ಲಿ ಕೊನೆಗೊಳ್ಳುವ ಭಾರತ್‌ ಜೋಡೊ ಯಾತ್ರೆಯು 150 ದಿನಗಳ ಕಾಲ 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಚರಿಸಲಿದೆ. ಸೆ.07 ರಂದು ಈ ಯಾತ್ರೆ ಆರಂಭಗೊಂಡಿದೆ. ಇತ್ತ ಕರ್ನಾಟಕದಲ್ಲಿ ವಿಧಾನಸಭೆ ಕಲಾಪ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT