ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನ್ನದಾತರ ಕಣ್ಣೀರ ಶಾಪ ಬಿಜೆಪಿಗೆ ತಟ್ಟದೆ ಇರುವುದಿಲ್ಲ: ಸಿದ್ದರಾಮಯ್ಯ ವಾಗ್ದಾಳಿ

Last Updated 6 ಅಕ್ಟೋಬರ್ 2022, 14:53 IST
ಅಕ್ಷರ ಗಾತ್ರ

ಬೆಂಗಳೂರು: ರಸಗೊಬ್ಬರ, ಕೀಟನಾಶಕಗಳ ಬೆಲೆ ಏರಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಲೆ ಏರಿಕೆ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿದ ಅವರು, ‘ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ವಚನ ನೀಡಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಸಗೊಬ್ಬರ, ಕೀಟನಾಶಕಗಳ ಬೆಲೆ ದುಪ್ಪಟ್ಟು ಮಾಡಿ ಅನ್ನದಾತನ ಬದುಕು ಕಸಿದಿದೆ’ ಎಂದು ಆರೋಪಿಸಿದ್ದಾರೆ.

‘ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದ ಬಿಜೆಪಿ ಆಡಳಿತದಲ್ಲಿ ರೈತರ ಸಂಕಷ್ಟ ಡಬಲ್ ಆಗಿದೆ. ರೈತರ ಆತ್ಮಹತ್ಯೆ ಡಬಲ್ ಆಗಿದೆ, ರೈತರ ಖರ್ಚು ಡಬಲ್ ಆಗಿದೆ. ಬೆಂಬಲ ಬೆಲೆಯಲ್ಲಿ ಅನ್ಯಾಯ, ಬೆಳೆನಷ್ಟ ಪರಿಹಾರದಲ್ಲಿ‌ ಮೋಸ ಇವು ಗಾಯದ ಮೇಲೆ ಎಳೆದ ಬರೆಗಳು’ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

‘ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ರೈತವಿರೋಧಿ ನೀತಿಗಳಿಂದಾಗಿ ಸಂಕಷ್ಟದಲ್ಲಿರುವ ರೈತರೊಂದಿಗೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕರಡ್ಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಸಂವಾದದಲ್ಲಿ ಪಾಲ್ಗೊಂಡು, ರೈತರ ಸಮಸ್ಯೆಗಳು ಮತ್ತು ಪರಿಹಾರಗಳ ಬಗ್ಗೆ ಚರ್ಚೆ ನಡೆಸಿದೆ’ ಎಂದು ಟ್ವೀಟ್ ಮಾಡಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT