ಶುಕ್ರವಾರ, ಡಿಸೆಂಬರ್ 9, 2022
20 °C

ಮಲ್ಲಿಕಾರ್ಜುನ ಖರ್ಗೆ ಗಾಂಧಿ ಕುಟುಂಬದ ರಿಮೋಟ್ ಕಂಟ್ರೋಲ್ ಆಗಬಾರದು: ಜೋಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಮಲ್ಲಿಕಾರ್ಜುನ ಖರ್ಗೆ ಅವರು ಹಿರಿಯರು. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಕುಟುಂಬ ರನ್ ಪಾರ್ಟಿ ಆಗಿದೆ. ಗಾಂಧಿ ಕುಟುಂಬದ ರಿಮೋಟ್ ಕಂಟ್ರೋಲ್ ಅಧ್ಯಕ್ಷ ಆಗಬಾರದು ಎನ್ನುವುದು ನಮ್ಮ ಆಶಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಥಮ ಬಾರಿ ಒಂದು ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ. ಕಾಂಗ್ರೆಸ್ ಕರ್ನಾಟಕದಲ್ಲಿ ಭಾರತ ಮಾತೆಯನ್ನು ಗೌರವಿಸುವವರ ಜೊತೆಗೆ ತೊಡಗಿಸಿಕೊಳ್ಳಲಿ ಎಂದು ಹೇಳಿದರು.

ದೆಹಲಿಯಿಂದಷ್ಟೇ ಅವರು ಆಡಳಿತ ನಡೆಸುತ್ತಿದ್ದರು. ಈಗ ಭಾರತ ಜೋಡೊ ಯಾತ್ರೆ ಮಾಡುತ್ತಿದ್ದಾರೆ. ಭಾರತ ಜೋಡೊ ಯಾತ್ರೆಗೆ ಯಾರ ಅಭ್ಯಂತರವೂ ಇಲ್ಲ. ಭಾರತ ತೋಡೊ ಆಗಬಾರದು. ರಾಹುಲ್ ಗಾಂಧಿ ಕರ್ನಾಟಕದಲ್ಲಿ ಭಾರತ ಮಾತೆಗೆ ಗೌರವ ಕೊಡುವವರನ್ನು ಭೇಟಿ ಆಗಲಿ ಎಂದರು.

ಹೃದಯದಿಂದ ಬಂದು ಯಾತ್ರೆಯಲ್ಲಿ ತೊಡಗಿಸಿಕೊಳ್ಳಲಿ. ಆರ್‌ಎಸ್‌ಎಸ್ ಅನ್ನು ಮೊದಲಿನಿಂದಲೂ ಟಾರ್ಗೆಟ್ ಮಾಡಲಾಗುತ್ತಿದೆ. ಆರ್‌ಎಸ್‌ಎಸ್ ದೇಶದ ಹಿತದ ಬಗ್ಗೆ ನಂಬಿಕೆ ಇಟ್ಟಿರುವ ಸಾಂಸ್ಕೃತಿಕ ಸಂಘಟನೆ ಎಂದು‌ ಹೇಳಿದರು.

ಓದಿ... ತೋಡೋ ಪಿತಾಮಹನ ಮರಿಮಗನಿಂದ ‘ಜೋಡೊ’ ಸಾಧ್ಯವೇ: ರಾಹುಲ್‌ಗೆ ಬಿಜೆಪಿ ಪ್ರಶ್ನೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು