ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ಬಂದ್‌: ಬೆಂಗಳೂರಿನಲ್ಲಿ ಪ್ರತಿಭಟನೆ ಆರಂಭ

Last Updated 8 ಡಿಸೆಂಬರ್ 2020, 6:03 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ್ ಬಂದ್ ಕರೆಗೆ ಬೆಂಬಲ ಕೋರಿ ನಗರದ ಹಲವೆಡೆ ಕಾಂಗ್ರೆಸ್ ಮತ್ತು ರೈತ ಸಂಘಟನೆಗಳ ಮುಖಂಡರು ಬೈಕ್ ರ್‍ಯಾಲಿ ನಡೆಸುತ್ತಿದ್ದು, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್‌ ಪ್ರತಿಭಟನೆ ಆರಂಭಿಸಿದೆ.

ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ, ಶಾಸಕ ಜಿ. ಪರಮೇಶ್ವರ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಜಮೀರ್ ಅಹಮದ್, ಪ್ರಿಯಾಂಕ್ ಖರ್ಗೆ ಹಾಗೂ ಇತರ ಶಾಸಕರು ಕಪ್ಪು ಬಾವುಟ ಹಿಡಿದು ಪ್ರತಿಭಟನೆ ಆರಂಭಿಸಿದ್ದಾರೆ.

ಶಿವಾಜಿನಗರ, ಬ್ರಿಗೇಡ್ ರಸ್ತೆ, ಸಂಪಿಗೆ ರಸ್ತೆ ಮತ್ತು ಕೆ.ಆರ್‌.ಮಾರುಕಟ್ಟೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ತೆರೆಯದಂತೆ ಬೈಕ್‌ನಲ್ಲಿ ತೆರಳಿ ಮನವಿ ಮಾಡಿದರು. ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಬೀದಿ ಬೀದಿಗಳಲ್ಲಿ ಸಂಚರಿಸಿ ಅಂಗಡಿಗಳನ್ನು ಮುಚ್ಚುವಂತೆ ಮನವಿ ಮಾಡಿದರು.

ಐಕ್ಯ ಹೋರಾಟ ಸಮಿತಿಯಿಂದಲೂ ಪ್ರತಿಭಟನೆ ಆರಂಭವಾಗಿದೆ. ಮೌರ್ಯ ವೃತ್ತದಿಂದ ಮೈಸೂರು ಬ್ಯಾಂಕ್ ವೃತ್ತದ ತನಕ ಜಾಥಾ ನಡೆಸಲು ಮುಂದಾಗಿದ್ದರೆ. ರೈತರ ಇನ್ನೊಂದು ಗುಂಪು ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಟೌನ್‌ಹಾಲ್‌ ಬಳಿಯಿಂದ ಸ್ವಾತಂತ್ರ್ಯ ಉದ್ಯಾನದ ತನಕ ಜಾಥಾ ನಡೆಸಲು ಸಜ್ಜಾಗಿದ್ದರೆ.

ಬಂದ್ ಬೆಂಬಲಿಸಿ ಯಶವಂತಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗಿದೆ. ಕೆ.ಆರ್. ಮಾರುಟಕ್ಟೆಯಲ್ಲಿ ವಹಿವಾಟು ಎಂದಿನಂತೆ ನಡೆಯುತ್ತಿದೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸಂಚಾರ ಎಂದಿನಂತೆ ಇದೆ. ಪ್ರತಿಭಟನೆ ವೇಳೆ ಅಹಿತಕರ ಘಟನೆಗಳು ಸಂಭವಿಸಿದಂತೆ ಎಲ್ಲೆಡೆ ಪೊಲೀಸರು ಕಟ್ಟಚ್ಚರ ವಹಿಸಿದ್ದಾರೆ. ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಭದ್ರತೆ ಹೆಚ್ಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT