ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂರ್ಯಾಸ್ತಕ್ಕೂ ಮುನ್ನ ಭಟ್ಟಾರಕ ಸ್ವಾಮೀಜಿ ಅಂತ್ಯ ಸಂಸ್ಕಾರ: ಜಿಲ್ಲಾಧಿಕಾರಿ

Last Updated 23 ಮಾರ್ಚ್ 2023, 8:50 IST
ಅಕ್ಷರ ಗಾತ್ರ

ಹಾಸನ: ಸ್ವಾಮೀಜಿ ನಿಧನ ವಿಚಾರ ತಿಳಿಯುತ್ತಿದ್ದಂತೆಯೇ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಬೆಳ್ಳೂರು ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು‌.

ಸ್ವಾಮೀಜಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಂಜೆ ಚಂದ್ರಗಿರಿಬೆಟ್ಟದ ತಪ್ಪಲಿನಲ್ಲಿ ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಎಸ್‌. ಅರ್ಚನಾ ತಿಳಿಸಿದ್ದಾರೆ.

ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಶ್ರೀಗಳು ಗುರುವಾರ ಬೆಳಿಗ್ಗೆ ನಿತ್ಯಕರ್ಮಕ್ಕೆ ಎದ್ದಾಗ, ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರವಾಗಿ ಪೆಟ್ಟಾಗಿತ್ತು. ಕೂಡಲೇ ಮಠದ ಸಿಬ್ಬಂದಿ ಶ್ರೀಗಳನ್ನು ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಹೇಳಿದರು.

ಸ್ವಾಮೀಜಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ಮಾಜಿಪ್ರಧಾನಿ ಎಚ್.ಡಿ‌.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ‌.ಕುಮಾರಸ್ವಾಮಿ, ಶಾಸಕರಾದ ಸಿ.ಎನ್. ಬಾಲಕೃಷ್ಣ, ಎಚ್.ಡಿ.ರೇವಣ್ಣ ಸೇರಿ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಶ್ರವಣಬೆಳಗೊಳದ ಚಾವುಂಡರಾಯ ಮಂಟಪದಲ್ಲಿ ಸ್ವಾಮೀಜಿ ಅವರ ಅಂತಿಮ‌ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಸ್ವಸ್ತಿಶ್ರೀಗಳ ಅಂತಿಮ ದರ್ಶನಕ್ಕೆ ವಿವಿಧ ಕ್ಷೇತ್ರದ ಗಣ್ಯರು ಸೇರಿ ರಾಜ್ಯದ ವಿವಿಧ ಮೂಲಗಳಿಂದ ಜನಸಾಗರವೇ ಹರಿದು ಬಂದಿದೆ. ಭದ್ರತೆಗಾಗಿ ಸುಮಾರು ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂಜೆ ಸೂರ್ಯಾಸ್ತಕ್ಕೂ ಮುನ್ನವೇ ಶ್ರವಣಬೆಳಗೊಳದ ಚಂದ್ರಗಿರಿ (ಚಿಕ್ಕಬೆಟ್ಟ ಸಮಾಧಿ ಗುಡ್ಡ) ಬೆಟ್ಟದ ತಪ್ಪಲಿನಲ್ಲಿ ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT