ಗುರುವಾರ , ಡಿಸೆಂಬರ್ 3, 2020
18 °C
ನೀರು ಬಿಡುಗಡೆ ಪ್ರಮಾಣದಲ್ಲಿ ಇಳಿಕೆ; ಮನೆಗಳನ್ನು ಸೇರಿದ ಹಾವು, ಚೇಳು

ಭೀಮಾ ತೀರದಲ್ಲಿ ತಗ್ಗುತ್ತಿರುವ ನೆರೆ: ದೂರವಾಗದ ಆತಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಭೀಮಾ ನದಿಯ ಹರಿವಿನ ಮಟ್ಟ ಮಂಗಳವಾರ ಗಣನೀಯವಾಗಿ ತಗ್ಗಿದ್ದು, ಕಲಬುರ್ಗಿ ಜಿಲ್ಲೆಯಲ್ಲಿ ಹಲವು ಗ್ರಾಮಗಳನ್ನು ಆವರಿಸಿಕೊಂಡಿದ್ದ ಪ್ರವಾಹ ಇಳಿಮುಖವಾಗುತ್ತಿದೆ.

ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಮುಂದುವರಿದಿದ್ದು, ಶಹಾಪುರ ತಾಲ್ಲೂಕಿನ ಹುರಸಗುಂಡಗಿ, ರೋಜಾ, ಹೊಸೂರ, ಅಣಬಿ ಗ್ರಾಮಗಳಿಗೆ ನೀರು ನುಗ್ಗಿ, ಸಾವಿರಾರು ಎಕರೆ ಜಮೀನು ಜಲಾವೃತ್ತವಾಗಿದೆ.

ಅಣಬಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ತೆಗೆದಿರುವ ಕಾಳಜಿ ಕೇಂದ್ರದಲ್ಲಿ ಶೌಚಾಲಯ ಇಲ್ಲ. ಬಯಲೇ ಗತಿಯಾಗಿದೆ ಎಂದು ಅಲ್ಲಿದ್ದ ಸಂತ್ರಸ್ತರು ದೂರಿದರು. ಶಹಾಪುರ ತಾಲ್ಲೂಕಿನ ರೋಜಾ ಗ್ರಾಮದವರನ್ನು ಸ್ಥಳಾಂತರಿಸಿರುವ ಹೊಸೂರ ಗ್ರಾಮದ ಕಾಳಜಿ ಕೇಂದ್ರದಲ್ಲಿ ಸ್ನಾನಕ್ಕೂ ಸೌಲಭ್ಯ ಇಲ್ಲ ಎಂದು ಮಹಿಳೆಯರು ಅಲವತ್ತುಕೊಂಡರು.

ಸೊನ್ನ ಬ್ಯಾರೇಜ್‌ ಹತ್ತಿರ ಮಂಗಳವಾರ ಮಧ್ಯಾಹ್ನದಿಂದ 1.78 ಲಕ್ಷ ಕ್ಯುಸೆಕ್ ನೀರು ಹರಿಯುತ್ತಿದೆ. ಚಿತ್ತಾಪುರ ತಾಲ್ಲೂಕಿನ ಕಡಬೂರ ಗ್ರಾಮದಲ್ಲಿ 100ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.

ರಾಯಚೂರು ಜಿಲ್ಲೆಯಲ್ಲಿಯೂ ಪ್ರವಾಹ ಭೀತಿ ದೂರವಾಗಿದೆ. ಕಲಬುರ್ಗಿ ನಗರ ಹಾಗೂ ಜಿಲ್ಲೆಯ ಹಲವೆಡೆ, ಕೊಪ್ಪಳ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ.

ಮತ್ತೆ ಮಳೆ (ಹುಬ್ಬಳ್ಳಿ ವರದಿ): ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಸಮೇತ ಮಂಗಳವಾರ ಮಳೆಯಾಗಿದೆ. ವಿಜಯಪುರ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದೆ. ಕೃಷ್ಣಾ, ಘಟಪ್ರಭಾ, ಭೀಮಾ ನದಿಗಳ ಪ್ರವಾಹ ಸ್ಥಿತಿ ಇಳಿಮುಖವಾಗಿದ್ದು, ನದಿಪಾತ್ರದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ಹಾಗೂ ಪರಿಹಾರ ಕಾರ್ಯಗಳು ಮುಂದುವರಿದಿವೆ.

ಬೆಳಗಾವಿ ನಗರವೂ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು–ಸಿಡಿಲು ಸಹಿತ ಜೋರು ಮಳೆ ಸುರಿದಿದೆ. ಗದಗ, ಹಾವೇರಿ, ಧಾರವಾಡ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಹಾಸನ ಜಿಲ್ಲೆಯಲ್ಲೂ ಮಳೆ ಆಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು