ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಐಎಎಲ್‌ಗೆ ‘ಗೋಲ್ಡನ್‌ ಪೀಕಾಕ್‌‘ ರಾಷ್ಟ್ರೀಯ ಗೌರವ

Last Updated 7 ಏಪ್ರಿಲ್ 2021, 14:58 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಗಮವು (ಬಿಐಎಎಲ್‌) 2020ನೇ ಸಾಲಿನ ‘ಗೋಲ್ಡನ್‌ ಪೀಕಾಕ್‌’ ರಾಷ್ಟ್ರೀಯ ಪ್ರಶಸ್ತಿ ಪಡೆದಿದೆ.

ಬಿಐಎಎಲ್‌ ಹಮ್ಮಿಕೊಂಡಿರುವ ‘ನಮ್ಮ ಶಿಕ್ಷಣ’ ಕಾರ್ಯಕ್ರಮಕ್ಕೆ ಈ ಪುರಸ್ಕಾರ ಒಲಿದಿದೆ.

‘ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಲಿನ ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ನಾವು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಇದು ಅತ್ಯಂತ ಯಶಸ್ವಿಯಾಗಿ ಸಾಗುತ್ತಿದೆ. ಶಿಕ್ಷಣದಿಂದ ವಿದ್ಯಾರ್ಥಿಗಳ ಬದುಕಿನಲ್ಲಿ ಬದಲಾವಣೆ ತರಬಹುದು, ಸಮಾಜದಲ್ಲಿ ಕ್ರಾಂತಿ ಸೃಷ್ಟಿಸಬಹುದು ಎಂಬುದನ್ನು ನಾವು ಬಲವಾಗಿ ನಂಬಿದ್ದೇವೆ. ಈ ಪುರಸ್ಕಾರ ಇನ್ನಷ್ಟು ಜನಪರ ಕೆಲಸಗಳನ್ನು ಮಾಡಲು ಪ್ರೇರಣೆಯಾಗಿದೆ’ ಎಂದು ಬಿಐಎಎಲ್‌ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಹರಿ ಮರಾರ್‌ ತಿಳಿಸಿದ್ದಾರೆ.

‘ನಮ್ಮ ಶಿಕ್ಷಣ’ ಕಾರ್ಯಕ್ರಮದ ಅಡಿಯಲ್ಲಿ ಬಿಐಎಎಲ್‌ ಐದು ಸರ್ಕಾರಿ ಶಾಲೆಗಳನ್ನು ಸ್ಥಾಪಿಸಿದ್ದು, ಆರು ಶಾಲೆಗಳನ್ನು ಉನ್ನತೀಕರಿಸಿದೆ. 21 ಅಂಗನವಾಡಿಗಳನ್ನೂ ಅಭಿವೃದ್ಧಿಪಡಿಸಿದೆ’ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT