ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್‌ ಜೂಜು ನಿಷೇಧಕ್ಕೆ ಮಸೂದೆ

Last Updated 17 ಸೆಪ್ಟೆಂಬರ್ 2021, 18:10 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್‌ ಜೂಜು ಮತ್ತು ಬೆಟ್ಟಿಂಗ್‌ ನಿಷೇಧಿಸುವ ಪ್ರತಿಬಂಧಕ ಕಾಯ್ದೆಯ ಮಸೂದೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ ಶುಕ್ರವಾರ ಮಂಡಿಸಿದರು.

ಆನ್‌ಲೈನ್‌ ಜೂಜು ನಿಷೇಧದ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆ. ಈ ಮಸೂದೆಯು ಲಾಟರಿ, ಕುದುರೆ ರೇಸ್‌ಗಳಿಗೆ ಅನ್ವಯವಾಗುವುದಿಲ್ಲ. ಮೊಬೈಲ್‌, ಕಂಪ್ಯೂಟರ್‌ ಮತ್ತಿತರ ಆನ್‌ಲೈನ್‌ ಜೂಜಾಟ ನಡೆಸುವುದು ಮತ್ತು ಬಾಜಿ ಕಟ್ಟುವುದಕ್ಕೆ ಮಾತ್ರ ಅನ್ವಯವಾಗಲಿದೆ ಎಂದರು.

ಕಾನೂನು ಉಲ್ಲಂಘಿಸಿ ಆನ್‌ಲೈನ್‌ ಜೂಜಿನಲ್ಲಿ ತೊಡಗುವವರು, ಅವರಿಗೆ ಸಹಾಯ ಮಾಡುವವರು ಮತ್ತು ಆಶ್ರಯ ನೀಡುವವರಿಗೆ 6 ತಿಂಗಳ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಲಾಗುವುದು ಎಂದು ಹೇಳಿದರು.

ಸೆಷನ್‌ ನ್ಯಾಯಾಲಯದ ವಿಚಾರಣೆ ಆನ್‌ಲೈನ್: ಸೆಷನ್ಸ್‌ ನ್ಯಾಯಾಲಯದ ವಿಚಾರಣೆಗಳನ್ನೂ ಆನ್‌ಲೈನ್‌ ಮೂಲಕ ನಡೆಸಲು ಸಹಾಯಕವಾಗುವ ‘ದಂಡ ಪ್ರಕ್ರಿಯಾ ಸಂಹಿತೆ ಮಸೂದೆ’ಗೆ ವಿಧಾನಸಭೆ ಒಪ್ಪಿಗೆ ನೀಡಿತು.

ಶಿಕ್ಷೆಗೊಳಗಾದ ಅಪರಾಧಿಗಳ ಮಾದರಿ ಸಂಗ್ರಹ: ನ್ಯಾಯಾಲಯದಿಂದ ಶಿಕ್ಷೆಗೆ ಒಳಪಟ್ಟ ಅಪರಾಧಿಗಳ ಬೆರಳಚ್ಚು, ಪಾದದ ಗುರುತಿನ ಜತೆಗೆ ರಕ್ತ, ಡಿಎನ್‌ಎ, ಧ್ವನಿ ಮಾದರಿ ಮತ್ತು ಕಣ್ಣಿನ ಪಾಪೆಯನ್ನು ಸಂಗ್ರಹಿಸಲಾಗುತ್ತದೆ. ಆದರೆ, ವಿಚಾರಣಾಧೀನ ಕೈದಿಗಳಿಂದ ಇವುಗಳನ್ನು ಪಡೆಯುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಗೆ ತಿಳಿಸಿದರು.

ಬಂದಿಗಳ ಗುರುತಿಸುವಿಕೆ ತಿದ್ದುಪಡಿ ಮಸೂದೆಯ ಕುರಿತು ಸ್ಪಷ್ಟನೆ ನೀಡಿದ ಅವರು, ಶಿಕ್ಷೆಗೆ ಒಳಪಡದ ವಿಚಾರಣಾಧೀನ ಕೈದಿಗಳಿಂದ ಮಾದರಿ ಸಂಗ್ರಹಿಸುವುದಿಲ್ಲ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT