ಮಂಗಳವಾರ, ಸೆಪ್ಟೆಂಬರ್ 21, 2021
21 °C
ಹಿಕ್ಕೆ ಹಾಕುತ್ತವೆ ಎಂದು ಕೊಂಬೆಗಳನ್ನೇ ಕಡಿದ ಗ್ರಾಮಸ್ಥರು

ಬೆಳ್ಳಕ್ಕಿ ಮರಿಗಳ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಟಿ.ನರಸೀಪುರ ತಾಲ್ಲೂಕಿನ ಕುಪ್ಯ ಗ್ರಾಮದಲ್ಲಿ ಮರದ ಕೊಂಬೆಗಳನ್ನು ಏಕಾಏಕಿ ಕತ್ತರಿಸಿದರಿಂದ ಬೆಳ್ಳಕ್ಕಿ (ಲಿಟಲ್ ಇಗ್ರೆಟ್) ಮರಿಗಳು ನೆಲಕ್ಕೆ ಬಿದ್ದು ಮೃತಪಟ್ಟಿವೆ.

‘ಪಕ್ಷಿಗಳು ಹಿಕ್ಕೆ ಹಾಕಿ ಅರಳಿಕಟ್ಟೆಯನ್ನು ಗಲೀಜು ಮಾಡುತ್ತವೆ’ ಎಂಬ ಕಾರಣಕ್ಕೆ ಗ್ರಾಮದ ಕೆಲವರು ಕೊಂಬೆಗಳನ್ನು ಕತ್ತರಿಸಿದ್ದಾರೆ. ಗಾಯಗೊಂಡು ನರಳುತ್ತಿದ್ದ ಕೆಲ ಮರಿಗಳನ್ನು ಅಲ್ಲಿಯೇ ಸುಟ್ಟಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪ್ರಗತಿ ಬರ್ಡ್ ಚಾರಿಟಬಲ್ ಆಸ್ಪತ್ರೆಯ ಅಧ್ಯಕ್ಷ ಡಾ.ಅಜಯಕುಮಾರ್ ಜೈನ್, ಉಳಿದ ಮರಿಗಳನ್ನು ರಕ್ಷಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದಾರೆ.

‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಇದು ಬೆಳ್ಳಕ್ಕಿಗಳು ಗೂಡುಕಟ್ಟಿ ಮರಿ ಮಾಡುವ ಕಾಲ. ಹಾರಲಾಗದ ಹಾಗೂ ಹಾರಲು ಕಲಿಯುತ್ತಿದ್ದ 14 ಪಕ್ಷಿಗಳ ಕಾಲು ಹಾಗೂ ರೆಕ್ಕೆಗಳು ಮುರಿದಿವೆ’ ಎಂದು ಹೇಳಿದರು.

‘ಈ ಕುರಿತು ಪರಿಶೀಲಿಸಲು ವಲಯ ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚಿಸಲಾಗುವುದು’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಕಮಲಾ ಕರಿಕಾಳನ್ ತಿಳಿಸಿದರು. 

‘ಪಕ್ಷಿ ವೀಕ್ಷಣೆ ಹಾಗೂ ಸಂರಕ್ಷಣೆಯ ಬಗ್ಗೆ ಕಾಳಜಿಯುಳ್ಳ ತಜ್ಞರು, ಕಾರ್ಯಕರ್ತರ ತವರು ಎಂದೇ ಹೆಸರಾದ ಮೈಸೂರಿಗೆ ಸಮೀಪದಲ್ಲೇ ಪಕ್ಷಿಗಳ ಕಗ್ಗೊಲೆ ನಡೆದಿರುವುದು ವಿಪರ್ಯಾಸ’ ಎಂದು ಪಕ್ಷಿತಜ್ಞ ಕೆ.ಮನು, ತನುಜ ವಿಷಾದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು