ಗುರುವಾರ , ಜನವರಿ 21, 2021
26 °C

ಸಿದ್ದರಾಮಯ್ಯ ಅತಿರೇಕದ ವರ್ತನೆ: ಬಿಜೆಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಬಾದಾಮಿಯಲ್ಲಿ ಸಮಸ್ಯೆ ಹೇಳಲು ಬಂದ ಗ್ರಾಮಪಂಚಾಯತ್‌ ಸದಸ್ಯರೊಬ್ಬರನ್ನು ವೇದಿಕೆಯಿಂದ ಕೆಳಗಿಳಿಸಿರುವುದು ಪಂಚಾಯತ್‌ ವ್ಯವಸ್ಥೆಗೇ ಮಾಡಿದ ಅಪಮಾನ ಎಂದು ಬಿಜೆಪಿ ವಕ್ತಾರ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ಹೇಳಿದ್ದಾರೆ.

ನೂತನವಾಗಿ ಆಯ್ಕೆಯಾದ ಗ್ರಾಮಪಂಚಾಯತ್‌ ಸದಸ್ಯ ಸಂಗಣ್ಣ ಜಾಬಣ್ಣ ಅವರು, ‘ಯಾರೂ ಹಳ್ಳಿ ಕಡೆಗೆ ಬಂದಿಲ್ಲ. ಆಶ್ರಯ ಮನೆಗಳು ಹಾಳಾಗಿ ಹೋಗಿವೆ. ಸಿದ್ದರಾಮಯ್ಯ ಬಂದು ಹೋದ್ರೂ ಕಾಮಗಾರಿ ಆಗಿಲ್ಲ’ ಎಂದು ತಮ್ಮ ಅಭಿಪ್ರಾಯ ಹೇಳುತ್ತಿದ್ದರು. ಆಗ ಸಿದ್ದರಾಮಯ್ಯ ದೂಡಿದರು. ಇದು ಅವರಿಗೆ ವ್ಯಕ್ತಿತ್ವಕ್ಕೆ ತಕ್ಕುದಾದ ನಡತೆಯಲ್ಲ’ ಎಂದು ಕಾರ್ಣಿಕ್‌ ತಿಳಿಸಿದ್ದಾರೆ.

‘ಈ ಮೂಲಕ ಸಿದ್ದರಾಮಯ್ಯ ತಮ್ಮನ್ನು ಆಯ್ಕೆ ಮಾಡಿದ ಕ್ಷೇತ್ರದ ಜನರನ್ನು ಅವಮಾನಿಸಿದ್ದಾರೆ. ಈ ಅತಿರೇಕದ ವರ್ತನೆಗೆ ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು